47 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

Update: 2020-07-06 18:10 GMT

ಬೆಂಗಳೂರು, ಜು.6: ಬೆಂಗಳೂರು, ಮಂಗಳೂರು ಜಿಲ್ಲೆ ಸೇರಿದಂತೆ ರಾಜ್ಯದ 47 ಪೊಲೀಸ್ ಇನ್ಸ್ ಪೆಕ್ಟರ್(ಸಿವಿಲ್)ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ಮಂಗಳೂರಿನ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಮಾನುಲ್ಲ ಎ. ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ, ಅದೇ ರೀತಿ, ನಿರೀಕ್ಷಣೆಯಲ್ಲಿದ್ದ ಆರ್.ರಾಜೇಶ್ ಅವರನ್ನು ಸಂಪಂಗಿರಾಮನಗರ ಪೊಲೀಸ್ ಠಾಣೆಗೆ ಸೇರಿದಂತೆ ಒಟ್ಟು 47 ಇನ್ಸ್ ಪೆಕ್ಟರ್ ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಇಲಾಖೆಯ ಡೈರೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News