ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಸತೀಶ್ ಜಾರಕಿಹೊಳಿ

Update: 2020-07-06 18:18 GMT

ಬೆಳಗಾವಿ, ಜು.6: ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು.

ಇಲ್ಲಿನ ಚಿಕ್ಕೋಡಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ನುಡಿದರು.

ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉತ್ಸಾಹಿ ರಾಜಕಾರಣಿಯಾಗಿದ್ದು, ಪಕ್ಷ ಕಟ್ಟುವ ಛಲ ಅವರಲ್ಲಿದೆ. ನಾವೆಲ್ಲರೂ ಅವರ ಜೊತೆಗೆ ಕೆಲಸ ಮಾಡುವ ಮೂಲಕ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂದರು.

ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗಿ ಬಂದಿದ್ದು ಅಪ್ರಸ್ತುತ. ಅವರ ಸಾಮಥ್ರ್ಯ ಹಾಗೂ ಪಕ್ಷ ಸೇವೆ ನೋಡಿ ಹೈಕಮಾಂಡ್ ಅವರಿಗೆ ಜವಾಬ್ದಾರಿ ನೀಡಿದೆ. ಹಿಂದೆ ಇದ್ದ ಕಾಂಗ್ರೆಸ್ ಬೇರೆ, ಮುಂದೆ ಬರಲಿರುವ ಕಾಂಗ್ರೆಸ್ ಬೇರೆ. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಪಕ್ಷವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News