ದ.ಕ.ಜಿಲ್ಲೆಯಲ್ಲಿ ಕೊರೋನ ವೈರಸ್ ಗೆ ಮತ್ತೊಂದು ಬಲಿ

Update: 2020-07-07 15:00 GMT
ಸಾಂದರ್ಭಿಕ ಚಿತ್ರ

ಮಂಗಳೂರು, ಜು.7: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 65 ವರ್ಷ ಪ್ರಾಯದ ಕೋಟೆಬಾಗಿಲಿನ ವ್ಯಕ್ತಿಯೊಬ್ಬರು ಮಂಗಳವಾರ ಮೃತಪಟ್ಟಿದ್ದು, ಅವರ ಗಂಟಲು ದ್ರವ ಪರೀಕ್ಷೆಯಲ್ಲಿ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ದ.ಕ.ಜಿಲ್ಲೆಯಲ್ಲಿ ಕೋವಿಡ್ 19ಗೆ ಬಲಿಯಾದವರ ಸಂಖ್ಯೆ 26ಕ್ಕೇರಿದೆ.

ಮಧುಮೇಹ, ನ್ಯುಮೋನಿಯಾ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಇವರು ಶುಕ್ರವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕವೂ ಆರೋಗ್ಯವಾಗಿದ್ದರು. ಮಂಗಳವಾರ ಬೆಳಗ್ಗೆ 6 ಗಂಟೆಯ ವೇಳೆಗೆ ಪತ್ನಿ, ಮಕ್ಕಳ ಜೊತೆ ಮಾತನಾಡಿದ್ದ ಇವರು ಪೂರ್ವಾಹ್ನದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

*ಎರಡು ಮನೆಗಳ ಸೀಲ್‌ಡೌನ್: ಕೋವಿಡ್ 19ರ ಮಾರ್ಗಸೂಚಿಯಂತೆ ಕೋಟೆಬಾಗಿಲಿನಲ್ಲಿ ಮೃತದೇಹವನ್ನು ದಫನ ಮಾಡಲಾಯಿತು. ಕೊರೋನ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮೃತರ ಮನೆ ಮತ್ತು ಅವರ ಹತ್ತಿರದಲ್ಲಿರುವ ಸಂಬಂಧಿಕರೊಬ್ಬರ ಮನೆಯನ್ನು ಸೀಲ್‌ಡೌನ್ ಮಾಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News