ಕೋವಿಡ್ ಪರೀಕ್ಷೆಗೆ ಹೆಚ್ಚಿನ ದರ ವಿಧಿಸಿದರೆ ಕಠಿಣ ಕ್ರಮ: ಸಚಿವ ಡಾ.ಸುಧಾಕರ್ ಎಚ್ಚರಿಕೆ

Update: 2020-07-07 12:01 GMT

ಬೆಂಗಳೂರು, ಜು. 7: ಮಾರಕ ಕೊರೋನ ಸೋಂಕಿನ ಪರೀಕ್ಷೆಗೆ ಖಾಸಗಿ ಲ್ಯಾಬ್ ಹಾಗೂ ಆಸ್ಪತ್ರೆಗಳಿಗೆ ದರ ನಿಗದಿ ಮಾಡಿದ್ದು, ಅದಕ್ಕಿಂತ ಹೆಚ್ಚಿನ ಮೊತ್ತ ವಿಧಿಸಿದರೆ ಅಂತಹ ಲ್ಯಾಬ್ ಮತ್ತು ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಟ್ವೀಟ್ ಮಾಡಿರುವ ಅವರು, `ಖಾಸಗಿ ಲ್ಯಾಬ್ ಮತ್ತು ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆಗಾಗಿ 4,500 ರೂ. ಗರಿಷ್ಟ ದರವನ್ನು ನಿಗದಿ ಮಾಡಲಾಗಿದೆ. ನಿಗದಿತ ದರಕ್ಕಿಂತ ಹೆಚ್ಚಿನ ದರ ವಿಧಿಸಿದ ಖಾಸಗಿ ಆಸ್ಪತ್ರೆಗೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕೋವಿಡ್ ಪರೀಕ್ಷೆಗೆ ಸರಕಾರ ವಿಧಿಸಿರುವ ನಿಯಮವನ್ನು ಉಲ್ಲಂಘಿಸುವ ಖಾಸಗಿ ಆಸ್ಪತ್ರೆ ಹಾಗೂ ಲ್ಯಾಬ್‍ಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು' ಎಂದು ಡಾ.ಸುಧಾಕರ್ ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News