ಗುರು ರಾಘವೇಂದ್ರ ಬ್ಯಾಂಕ್ ಮಾಜಿ ಸಿಇಒ ಆತ್ಮಹತ್ಯೆ ಪ್ರಕರಣ: ಡೆತ್ ನೋಟ್ ಆಧಾರದ ಮೇಲೆ ತನಿಖೆ

Update: 2020-07-07 14:12 GMT

ಬೆಂಗಳೂರು, ಜು.7: ಬಸವನಗುಡಿಯ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕಿನ ಮಾಜಿ ಸಿಇಒ ವಾಸುದೇವ ಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ಡೆತ್ ನೋಟ್ ಆಧಾರದ ಮೇಲೆ ತನಿಖೆ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ.

ಈ ಸಂಬಂಧ ಈಗಾಗಲೇ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತಹತ್ಯೆಗೆ ಶರಣಾಗುವ ಮುಂಚೆ ಕಾರಿನಲ್ಲಿ 12 ಪುಟಗಳ ಡೆತ್‍ನೋಟ್ ಬರೆದಿಟ್ಟಿದ್ದಾರೆ. ಜತೆಗೆ ಕೆಲ ಕಡತಗಳು ಕಾರಿನ ಢಿಕ್ಕಿಯಲ್ಲಿ ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಮಂಗಳವಾರ ಸಿಐಡಿ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸದ್ಯ ಮೃತದೇಹ ಆಸ್ಪತ್ರೆಯಲ್ಲಿದ್ದು, ಎಫ್‍ಎಸ್‍ಎಲ್ ವರದಿಯ ಬಳಿಕ ಮೃತದೇಹ ಕೋವಿಡ್-19 ಪರೀಕ್ಷೆಗೆ ಒಳಪಡಿಸಿ ಬುಧವಾರ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಿದ್ದಾರೆ.

ಏನಿದು ಘಟನೆ: ಮಾಜಿ ಸಿಇಒ ವಾಸುದೇವಮಯ್ಯ ಸೋಮವಾರ ಸಂಜೆ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಉತ್ತರ ಹಳ್ಳಿಯ ಪೂರ್ಣಪ್ರಜ್ಞ ಲೇಔಟ್ ಬಳಿಯ ತಮ್ಮ ನಿವಾಸದ ಹತ್ತಿರದಲ್ಲಿಯೇ ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News