ಪ್ರತಿಷ್ಠಿತ ಕಂಪೆನಿ ಹೆಸರಲ್ಲಿ ಟಿವಿ ಮಾರಾಟ ಆರೋಪ: ಓರ್ವನ ಬಂಧನ

Update: 2020-07-07 15:25 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.7: ಸಾಧಾರಣ ಟಿವಿಗಳಿಗೆ ಪ್ರತಿಷ್ಠಿತ ಕಂಪೆನಿಯ ಹೆಸರು ಅಂಟಿಸಿ ಮಾರಾಟ ಮಾಡಿ ಗ್ರಾಹಕರಿಗೆ ವಂಚಿಸುತ್ತಿದ್ದ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚಾಮರಾಜಪೇಟೆಯ ಸುರೇಶ್(45) ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯು ಸಾಧಾರಣ ಟಿವಿಗಳನ್ನು ಖರೀದಿಸಿ, ಅದಕ್ಕೆ ಪ್ರತಿಷ್ಠಿತ ಕಂಪೆನಿಯ ಸ್ಟೀಕರ್ ಅಂಟಿಸಿ, ಅಸಲಿ ಟಿವಿಗಳಂತೆ ಬಿಂಬಿಸಿ ಅಧಿಕ ಬೆಲೆಗೆ ಗ್ರಾಹಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಕೆಲವರು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು.

ಈ ಸಂಬಂಧ ಪ್ರಕರಣದ ದಾಖಲಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತನಿಂದ 15 ಟಿವಿ, 75 ಸಾವಿರ ರೂ. ನಗದು ಜಪ್ತಿ ಮಾಡಿ, ತನಿಖೆ ಮುಂದುವರಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News