ಉಡುಪಿ: ಕೋವಿಡ್ ಐಸೋಲೇಷನ್ ವಾರ್ಡ್‌ನಲ್ಲಿ ವೃದ್ಧ ಆತ್ಮಹತ್ಯೆ

Update: 2020-07-07 16:35 GMT
ಸಾಂದರ್ಭಿಕ ಚಿತ್ರ

ಉಡುಪಿ, ಜು.7: ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಕೋವಿಡ್-19 ಶಂಕಿತರ ಐಸೋಲೇಷನ್ ವಾರ್ಡ್‌ನಲ್ಲಿ ದಾಖಲಾಗಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.6ರಂದು ಬೆಳಗ್ಗೆ 6:50ರ ಸುಮಾರಿಗೆ ನಡೆದಿದೆ.

ಮೃತರನ್ನು ಶಿರ್ವ ಪರಿಸರದ ಪ್ರಭಾಕರ ಪುತ್ರನ್(63) ಎಂದು ಗುರು ತಿಸಲಾಗಿದೆ. ಕುಡಿತದ ಚಟ ಹೊಂದಿದ್ದ ಇವರು ಜ್ವರದಿಂದ ಬಳಲುತ್ತಿದ್ದ ಕಾರಣಕ್ಕೆ ಜು.5ರಂದು ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿತ್ತು. ಇವರನ್ನು ಕೊರೆನ ಪರೀಕ್ಷೆಗೆ ಒಳಪಡಿಸಲಾಗಿತ್ತು.
 ಈ ಮಧ್ಯೆ ಜೀವನದಲ್ಲಿ ಜಿಗುಪ್ಸೆಗೊಂಡ ಇವರು, ವಾರ್ಡ್‌ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಕೊರೋನ ಪರೀಕ್ಷಾ ವರದಿ ಇಂದು ನೆಗೆಟಿವ್ ಎಂಬುದಾಗಿ ಬಂದಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News