ಗುತ್ತಿಗೆ ಭೂಮಿ ಖುಲ್ಲಾ ಇದ್ದರೆ ಸರಕಾರದ ವಶಕ್ಕೆ ಪಡೆಯಲು ಕಂದಾಯ ಇಲಾಖೆ ಆದೇಶ

Update: 2020-07-07 17:46 GMT

ಬೆಂಗಳೂರು, ಜು. 7: ಗುತ್ತಿಗೆ ನೀಡಲಾಗಿರುವ ಜಮೀನುಗಳನ್ನು ಖಾಯಂ ಮಂಜೂರಾತಿ ಪಡೆಯಲು ಗುತ್ತಿಗೆ ಪಡೆದ ಸಂಸ್ಥೆಯು ಇಚ್ಛಿಸದಿದ್ದಲ್ಲಿ, ಅಂತಹ ಗುತ್ತಿಗೆ ಜಮೀನುಗಳನ್ನು ಸ್ಥಳ ಪರಿವೀಕ್ಷಣೆ ನಡೆಸಿ, ಉಪಯೋಗಿಸದೇ ಖುಲ್ಲಾ ಉಳಿಸಲಾಗಿರುವ ವಿಸ್ತೀರ್ಣದ ಜಮೀನು ಪುನಃ ಸರಕಾರಕ್ಕೆ ವಶಪಡಿಸಿಕೊಳ್ಳಬೇಕು ಎಂದು ಕಂದಾಯ ಇಲಾಖೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.

ಖಾಸಗಿ ಸಂಘ-ಸಂಸ್ಥೆಗಳಿಗೆ ಕೈಗಾರಿಕೆ, ಶೈಕ್ಷಣಿಕ, ಕಲ್ಯಾಣ ಚಟುವಟಿಕೆಗಳು, ಧಾರ್ಮಿಕ, ಕೃಷಿ ಮತ್ತು ಕೃಷಿಯೇತರ ಉದ್ದೇಶಗಳಿಗೆ ಈಗಾಗಲೇ ಕರ್ನಾಟಕ ಭೂ ಮಂಜೂರಾತಿ ನಿಯಮಗಳು-1969ರ ನಿಯಮ 19ರ ಅನ್ವಯ ಗುತ್ತಿಗೆ ಆಧಾರ ಮೇಲೆ ನೀಡಿರುವ ಸರಕಾರಿ ಜಮೀನನ್ನು ಗುತ್ತಿಗೆ ಪಡೆದ ಸಂಸ್ಥೆ ಅದೇ ಉದ್ದೇಶಕ್ಕೆ ಖಾಯಂ ಮಂಜೂರಾತಿಗೆ ಕೋರಿದ್ದಲ್ಲಿ ಪ್ರಸ್ತುತ ಮಾರ್ಗಸೂಚಿ ಮೌಲ್ಯವನ್ನ ವಿಧಿಸಬೇಕು. ಅನ್ಯ ಉದ್ದೇಶಕ್ಕೆ ಖಾಯಂ ಮಂಜೂರಾತಿ ಕೋರಿದ್ದಲ್ಲಿ ಮಾರ್ಗಸೂಚಿ ಮೌಲ್ಯಕ್ಕಿಂತ ಎರಡು ಪಟ್ಟು ಮೊತ್ತ ವಿಧಿಸಿ ಖಾಯಂ ಮಂಜೂರಾತಿ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News