ರಂಗಾಯಣದಲ್ಲಿ ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ

Update: 2020-07-07 18:19 GMT

ಉಡುಪಿ, ಜು.7: ಕರ್ನಾಟಕ ಸರಕಾರ ಮೈಸೂರಿನಲ್ಲಿ ಸ್ಥಾಪಿಸಿರುವ ‘ರಂಗಾಯಣ’ ರಂಗತರಬೇತಿ ಶಾಲೆ ಹತ್ತು ತಿಂಗಳ ಡಿಪ್ಲೊಮಾ ಕೋರ್ಸನ್ನು ನಡೆಸುತ್ತಾ ಬಂದಿದೆ. ಪ್ರಸ್ತುತ 2020-21ನೇ ಸಾಲಿನ ರಂಗ ತರಬೇತಿ ಕೋರ್ಸ್ ಗೆ ಸೇರಬಯಸುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೋರ್ಸ್‌ಗೆ ಸೇರಲಿಚ್ಛಿಸುವ ಆಸಕ್ತರು ಕನಿಷ್ಠ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ಅಭ್ಯರ್ಥಿಗಳು 18ರಿಂದ 28 ವರ್ಷದೊಳಗಿರೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಾಮನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಅಲ್ಲದೇ ತಿಂಗಳಿಗೆ 3,000ರೂ. ವಿದ್ಯಾರ್ಥಿ ವೇತನ ಹಾಗೂ 2.000ರೂ.ಗಳ ಊಟೋಪಚಾರದ ಭತ್ಯೆ ಪಾವತಿಸಲಾಗುವುದು.

ರಂಗಶಾಲೆಗೆ ಸೇರಬಯಸುವ ವಿದ್ಯಾರ್ಥಿಗಳು ರಂಗಾಯಣದ ವೆಬ್‌ಸೈಟ್ - -ನಲ್ಲಿ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಅಥವಾ ರಂಗಾಯಣದ ಕಚೇರಿಯಿಂದ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ವಿವರಕ್ಕಾಗಿ ದೂರವಾಣಿ ಸಂಖ್ಯೆ: 0821-2512639,9448938661,9916600027 ಮತ್ತು 9448422343 ನ್ನು ಸಂಪರ್ಕಿಸಬಹುದು ಎಂದು ರಂಗಾಯಣದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News