ದ.ಕ. ಜಿಲ್ಲೆಯಲ್ಲಿ ಕೊರೋನಗೆ ಮತ್ತೆ ಮೂವರು ಬಲಿ

Update: 2020-07-08 05:15 GMT

ಮಂಗಳೂರು, ಜು.8: ದ.ಕ. ಜಿಲ್ಲೆಯಲ್ಲಿ ಕೊರೋನ ಸಾವಿನ ಸಂಖ್ಯೆ ಏರುತ್ತಲೇ ಇದ್ದು, ಬುಧವಾರ ಮತ್ತೆ ಮೂವರು ಈ ಮಹಾಮಾರಿಗೆ ಬಲಿಯಾಗಿದ್ದಾರೆ.

ಉಳ್ಳಾಲ ಮೂಲದ 62 ವರ್ಷದ ವೃದ್ಧೆ, ಪುತ್ತೂರು ಮೂಲದ 32 ವರ್ಷದ ಮಹಿಳೆ ಹಾಗೂ ಭಟ್ಕಳ ಮೂಲದ 60 ವರ್ಷದ ವ್ಯಕ್ತಿಯೊಬ್ಬರು ಇಂದು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಕೊರೋನ ಪಾಸಿಟಿವ್ ಆಗಿದ್ದ ಈ ಮೂವರೂ ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದರೆನ್ನಲಾಗಿದೆ.

ಈ ಪೈಕಿ ಇಬ್ಬರು ಮಹಿಳೆಯರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಭಟ್ಕಳ ಮೂಲದ 60 ವರ್ಷದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೂವರಿಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಈ ಮೂರು ಸಾವಿನೊಂದಿಗೆ ದ.ಕ. ಜಿಲ್ಲೆಯಲ್ಲಿ ಕೊರೋನ ವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 29ಕ್ಕೇರಿಕೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News