ಭಾರತದಲ್ಲಿ ಒಂದೇ ದಿನ 22,752 ಹೊಸ ಕೋವಿಡ್-19 ಪ್ರಕರಣ

Update: 2020-07-08 05:43 GMT

ಹೊಸದಿಲ್ಲಿ, ಜು.8: ಭಾರತದಲ್ಲಿ ಕೊರೋನ ವೈರಸ್ ಸೋಂಕಿಗೆ ಒಳಗಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುಮುಖವಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 22,752 ಹೊಸ ಕೊರೋನ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 482 ಮಂದಿ ಕೊರೋನಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ.

ಬುಧವಾರ ದೇಶದಲ್ಲಿ ಒಟ್ಟು ಕೊರೋನ ವೈರಸ್ ಸೋಂಕಿತರ ಸಂಖ್ಯೆ 7,42,417ಕ್ಕೆ ತಲುಪಿದೆ. ಒಟ್ಟು ಪ್ರಕರಣಗಳ ಪೈಕಿ 4,56,830 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News