ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಸಾರ್ವಜನಿಕ ಪ್ರವೇಶ ಮತ್ತೆ ನಿರ್ಬಂಧ?

Update: 2020-07-08 10:17 GMT

ಮಂಗಳೂರು, ಜು.8: ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಮತ್ತೆ ಪಾಲಿಕೆ ಕಚೇರಿಯನ್ನು ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧಿಸುವ ಚಿಂತನೆ ನಡೆದಿದೆ.

ಲಾಲ್‌ಬಾಗ್‌ನಲ್ಲಿರುವ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯನ್ನು ಕಳೆದ ವಾರ ಸ್ಯಾನಿಟೈಸೇಶನ್ ಮಾಡುವ ಉದ್ದೇಶದಿಂದ ಒಂದು ವಾರ ಕಾಲ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಬಳಿಕ ನಿನ್ನೆ ಮೇಯರ್ ದಿವಾಕರ ಪಾಂಡೇಶ್ವರ ಅವರು ಅಪರಾಹ್ನ 3ರಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕ ಸೇವೆಗೆ ತೆರೆದಿರುತ್ತದೆ ಎಂದು ಪ್ರಕಟನೆ ನೀಡಿದ್ದರು. ಇದೀಗ ಪಾಲಿಕೆಯ ಸಿಬ್ಬಂದಿಯೊಬ್ಬರಿಗೆ ಕೊರೋನ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮತ್ತೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸುವ ಸಾಧ್ಯತೆ ಇದೆ.

ಸಾರ್ವಜನಿಕರ ತುರ್ತು ಕೆಲಸ ಕಾರ್ಯಗಳಿಗೆ ಸಂಬಂಧಿಸಿ ಕಚೇರಿ ಹೊರ ಆವರಣದಲ್ಲಿ ಬಾಕ್ಸ್ ಮಾಡಿ ಅಧಿಕಾರಿ ಹಾಗೂ ಸಿಬ್ಬಂದಿ ಅಗತ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಚಿಂತಿಸಲಾಗಿದೆ. ಈ ಕುರಿತಂತೆ ಅಧಿಕೃತವಾದ ನಿರ್ಧಾರವನ್ನು ಮೇಯರ್ ಹೊರಡಿಸಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News