ರಾಜ್ಯದ ಶಾಸಕ, ಅವರ ಪತ್ನಿಗೆ ಕೊರೋನ ಸೋಂಕು ದೃಢ

Update: 2020-07-08 13:18 GMT

ಬೆಂಗಳೂರು, ಜು.8: ರಾಜ್ಯದ ರಾಜಕಾರಣಿಗಳಲ್ಲಿಯೂ ಕೊರೋನ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಇಂದು ಶಾಸಕರೊಬ್ಬರು ಹಾಗೂ ಅವರ ಪತ್ನಿಗೆ ಕೊರೋನ ಪಾಸಿಟಿವ್ ಬಂದಿದೆ.

ಕೊರೋನ ಪಾಸಿಟಿವ್ ವರದಿ ದೃಢಪಟ್ಟಿರುವ ಕುರಿತು ಸ್ವತಃ ಶಾಸಕರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ವಿಡಿಯೋ ಟ್ವೀಟ್ ಮಾಡಿರುವ ಅವರು, ತಮ್ಮೊಂದಿಗೆ ಸಂಪರ್ಕದಲ್ಲಿರುವ ಇತರರು ಕೋವಿಡ್ ಲಕ್ಷಣ ಕಂಡು ಬಂದರೆ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

"ಜುಲೈ 6 ಸೋಮವಾರ ದಂದು, ನನಗೆ ಸ್ವಲ್ಪ ಮೈ ಕೈ ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೋನ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ನಾನು ಮತ್ತು ನನ್ನ ಧರ್ಮಪತ್ನಿ ಒಳಗಾಗಿದ್ದು, ಇವತ್ತು ಸಂಜೆ ಇಬ್ಬರಿಗೂ ಪಾಸಿಟಿವ್ ಎಂದು ಫಲಿತಾಂಶ ಬಂದಿದೆ" ಎಂದು ತಿಳಿಸಿದ್ದಾರೆ. 

ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇವೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀವಿ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ರೋಗ ನಿರೋಧಕ ಶಕ್ತಿಯು ನಮ್ಮಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇವೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News