×
Ad

ಕೊಡಗಿನಲ್ಲಿ ಕೊರೋನ ಸೋಂಕಿತರ ಸಂಖ್ಯೆ 95ಕ್ಕೆ ಏರಿಕೆ

Update: 2020-07-08 19:28 IST

ಮಡಿಕೇರಿ, ಜು.8: ಕೊಡಗು ಜಿಲ್ಲೆಯಲ್ಲಿ ಹೊಸದಾಗಿ 3 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 95ಕ್ಕೆ ಏರಿಕೆಯಾಗಿದೆ.

ಸೋಮವಾರಪೇಟೆ ತಾಲೂಕಿನ ಕುಶಾಲನಗರದ 36 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಇವರು ಮಹರಾಷ್ಟ್ರದಿಂದ ಬಂದಿದ್ದು, ಇವರನ್ನು ನೇರವಾಗಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಡಿಕೇರಿ ತಾಲೂಕಿನ ಚೇರಂಬಾಣೆಯ 77 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಇವರಲ್ಲಿ ಹೆಚ್ಚಿನ ಅನಾರೋಗ್ಯ ಕಂಡುಬಂದ ಕಾರಣ ಇವರನ್ನು ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿದೆ. ವಿರಾಜಪೇಟೆ ತಾಲೂಕು ಅರ್ಜಿ ಗ್ರಾಮದಲ್ಲಿ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ 8 ವರ್ಷದ ಮಗಳಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಹೊಸದಾಗಿ ಮಡಿಕೇರಿ ತಾಲೂಕಿನ ಚೇರಂಬಾಣೆಯಲ್ಲಿ ನಿಯಂತ್ರಿತ ಪ್ರದೇಶವನ್ನು ತೆರೆಯಲಾಗಿದೆ. 

ಒಟ್ಟು 95 ಮಂದಿ ಸೋಂಕಿತರಲ್ಲಿ 16 ಮಂದಿ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. 78 ಮಂದಿಗೆ ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲೆಯ 37 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News