ನೇತ್ರಾವತಿ ನದಿಗೆ ಹಾರಿದ ವ್ಯಕ್ತಿಯ ಮೃತದೇಹ ಪತ್ತೆ

Update: 2020-07-08 14:50 GMT

ಮಂಗಳೂರು, ಜು.8: ನಗರದ ಹೊರವಲಯದ ಜಪ್ಪಿನಮೊಗರು ಬಳಿ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ.

ಹರೇಕಳ ಗ್ರಾಮದ ಕಿಶೋರ್ ಅಡ್ಯಂತಾಯ (37) ಆತ್ಮಹತ್ಯೆಗೈದ ವ್ಯಕ್ತಿ ಎಂದು ತಿಳಿದುಬಂದಿದೆ. ಶನಿವಾರ ಮಧ್ಯಾಹ್ನ ಕೊಡೆಯನ್ನು ಸೇತುವೆ ಮೇಲಿಟ್ಟು ನೀರಿಗೆ ಹಾರಿದ್ದರು. ಇದನ್ನು ವಾಹನದಲ್ಲಿ ಹೋಗುತ್ತಿದ್ದವರು ಗಮನಿಸಿ ಕಂಕನಾಡಿ ನಗರ ಠಾಣೆ ಪೊಲೀಸರಿಗೆ ತಿಳಿಸಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತೆರಳಿದ್ದರು.

ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಪರಿಣಾಮ ಹೆಚ್ಚಿನ ಶೋಧ ನಡೆಸಲು ಅಸಾಧ್ಯವಾಗಿತ್ತು. ಈಗ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ನದಿ ತೀರದಲ್ಲಿ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News