​ರಾಜ್ಯ ಮಟ್ಟದ ಪುಸ್ತಕ ಆಯ್ಕೆಗಾಗಿ ಅರ್ಜಿ ಆಹ್ವಾನ

Update: 2020-07-08 16:09 GMT

ಉಡುಪಿ, ಜು.8:ಏಕಗವಾಕ್ಷಿ ಯೋಜನೆಯಡಿ ರಾಜ್ಯ ಮಟ್ಟದ ಪುಸ್ತಕ ಆಯ್ಕೆಗಾಗಿ 2020ನೇ ಸಾಲಿನ ಜನವರಿ 1ರಿಂದ ಜೂನ್ 30 ರವರೆಗೆ ಪ್ರಥಮ ಮುದ್ರಣವಾಗಿ ಪ್ರಕಟವಾದ ಸಾಹಿತ್ಯ, ಸ್ವರ್ಧಾತ್ಮಕ ಪಠ್ಯ, ಸಾಂದರ್ಭಿಕ, ಮಕ್ಕಳ ಸಾಹಿತ್ಯ, ವಿಚಾರ ಸಾಹಿತ್ಯ, ಸ್ಪರ್ಧಾತ್ಮಕ ಪರೀಕ್ಷೆ ಇತ್ಯಾದಿ ವಿಷಯಗಳ ಕನ್ನಡ, ಆಂಗ್ಲ ಮತ್ತು ಭಾರತೀಯ ಇತರ ಭಾಷೆಯ ಗ್ರಂಥಗಳ ಆಯ್ಕೆಗಾಗಿ ಲೇಖಕರು, ಲೇಖಕ-ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿಂದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.

ಕೋವಿಡ್-19 ಹಿನ್ನೆಲೆ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು, ಇಲ್ಲಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹಂಪಿನಗರದ ನಗರ ಕೇಂದ್ರ ಗ್ರಂಥಾಲಯ, ಪಶ್ಚಿಮ ವಲಯ, ಇಲ್ಲಿ ಜುಲೈ 30ರೊಳಗೆ ಪುಸ್ತಕಗಳನ್ನು ಕಾಪಿರೈಟ್ ಮಾಡಿಸುವುದು. ಕಾಪಿರೈಟ್ ಮಾಡಿಸಿದ ಪುಸ್ತಕದ ಒಂದು ಪ್ರತಿಯನ್ನು ಅರ್ಜಿಯೊಂದಿಗೆ ಜುಲೈ 31ರೊಳಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ಡಾ. ಅಂಬೇಡ್ಕರ್ ವೀಧಿ, 4ನೇ ಮಹಡಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ:080-22864990, 22867358 ಅಥವಾ ಉಡುಪಿ ನಗರ ಕೇಂದ್ರ ಗ್ರಂಥಾಲಯದ ಕಚೇರಿ ದೂರವಾಣಿ ಸಂಖ್ಯೆ: 0820-2523395, 9342326112 ಅನ್ನು ಸಂಪರ್ಕಿಸುವಂತೆ ಉಡುಪಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಜಯಶ್ರೀ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News