ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2020-07-08 17:59 GMT

ಬೆಂಗಳೂರು, ಜು.8: ಸಾರ್ವಜನಿಕ ಶಿಕ್ಷಣ ಇಲಾಖೆ 2020-21ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆಗಳು: ಕರ್ನಾಟಕ ರಾಜ್ಯದ ಸರಕಾರಿ, ಅನುದಾನಿತ ಪ್ರಾಥಮಿಕ ಅಥವಾ ಪ್ರೌಢಶಾಲೆಗಳಲ್ಲಿ ಸಹ ಶಿಕ್ಷಕರು, ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರಾಗಿ ಕನಿಷ್ಟ ಹತ್ತು ವರ್ಷಗಳ ಸೇವೆಯನ್ನು ಸಲ್ಲಿಸುವವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ರಾಜ್ಯ, ರಾಷ್ಟ್ರಪ್ರಶಸ್ತಿ ಪಡೆದಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವಂತಿಲ್ಲ.

ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಯನ್ನು ಸಂಪೂರ್ಣ ಪ್ರಕ್ರಿಯೆಯನ್ನು ಆನ್‍ಲೈನ್ ಮೂಲಕ ನಿರ್ವಹಿಸಲಾಗುತ್ತದೆ. ಅರ್ಹ ಶಿಕ್ಷಕರು ಜು.21ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಮುನ್ನ http://www.schooleducation.kar.nic.in ಅಂತರ್ ಜಾಲದ ಮುಖಪುಟದಲ್ಲಿರುವ ಸುತ್ತೋಲೆ, ಬಳಕೆದಾರರ ಕೈಪಿಡಿ ಮತ್ತು ಅನುಬಂಧ-01ರಲ್ಲಿ ನೀಡಲಾಗಿರುವ ಮಾದರಿ ಅರ್ಜಿ ನಮೂನೆಯನ್ನು ಓದಿ, ಅದೇ ಮಾದರಿಯಲ್ಲಿ ಪೂರಕ ಮಾಹಿತಿಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News