×
Ad

ಸಂಜೆ 7ರಿಂದ ಬೆಳಗ್ಗೆ 7ರವರೆಗೆ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧ

Update: 2020-07-09 13:51 IST

ಚಿಕ್ಕಮಗಳೂರು: ಮಣ್ಣು ಕುಸಿಯುವ ಭೀತಿ ಇರುವುದರಿಂದ ಚಾರ್ಮಾಡಿ ಘಾಟ್ ನಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ. ಗೌತಮ್ ಬಗಾದಿ ಆದೇಶಿಸಿದ್ದಾರೆ.

ಕಳೆದ ಬಾರಿಯ ಮಳೆಯಿಂದ ಗುಡ್ಡ ಕುಸಿದಿದ್ದು, ರಸ್ತೆಗಳು ಸಂಪೂರ್ಣ ಹಾನಿಗೊಂಡಿವೆ. ಈ ಬಾರಿ ತಾತ್ಕಾಲಿಕವಾಗಿ ಕೆಲಸ ಪ್ರಾರಂಭಿಸಿ, ಬೇಸಿಗೆಯಲ್ಲಿ ಲಘು ವಾಹನ ಸಂಚರಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಬಾರಿಯೂ ಮಳೆ ಜೋರಾಗಿ ಸುರಿಯುತ್ತಿರುವುದರಿಂದ ಅಲ್ಲಲ್ಲಿ ಮಣ್ಣು ಕುಸಿಯುವ ಸಾಧ್ಯತೆ ಇದೆ.

ರಸ್ತೆಗಳಿಗೆ ತಾತ್ಕಾಲಿಕ  ತಡೆಗೋಡೆ ನಿರ್ಮಿಸಲಾಗಿದ್ದು , ರಾತ್ರಿಯ ವೇಳೆ ಸಂಚರಿಸಲು ಸೂಕ್ತವಲ್ಲ. ಈ ಹಿನ್ನೆಲೆಯಲ್ಲಿ  ಯಾವುದೇ ವಾಹಗಳು ಚಾರ್ಮಾಡಿ ಘಾಟ್ ನಲ್ಲಿ ಸಂಚರಿಸದಂತೆ ನಿರ್ಬಂಧಿಸಲಾಗಿದೆ.  
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News