ಯಡಿಯೂರಪ್ಪ ತಿದ್ದಿಕೊಳ್ಳದೆ ಇದ್ದಾಗ ಬಹಿರಂಗವಾಗಿ ಪ್ರಶ್ನಿಸುವುದು ಅನಿವಾರ್ಯ: ಸಿದ್ದರಾಮಯ್ಯ

Update: 2020-07-09 11:34 GMT

ಬೆಂಗಳೂರು, ಜು. 9: `ಕೊರೋನ ಸೋಂಕಿನ ಸಂಕಷ್ಟ ಕಾಲದಲ್ಲಿ ಸಹಕಾರ, ವಿರೋಧ ಪಕ್ಷದ ಜವಾಬ್ದಾರಿ ಎಂಬ ಕಾರಣಕ್ಕೆ ಹೆಚ್ಚು ಕಡಿಮೆ ಮೂರು ತಿಂಗಳು ಸರಕಾರದ ಅಕ್ರಮ-ವೈಫಲ್ಯಗಳನ್ನು ಬಹಿರಂಗವಾಗಿ ಪ್ರಶ್ನಿಸದೆ ಪತ್ರಗಳನ್ನಷ್ಟೇ ಬರೆದಿದ್ದೆ. ಮುಖ್ಯಮಂತ್ರಿ ಯಡಿಯೂರಪ್ಪ ತಿದ್ದಿಕೊಳ್ಳದೆ ಇದ್ದಾಗ ಬಹಿರಂಗವಾಗಿ ಪ್ರಶ್ನಿಸುವುದು ಅನಿವಾರ್ಯವಾಗಿದೆ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, `ಜನತೆಯ ಕಷ್ಟ-ನಷ್ಟಕ್ಕೆ ಕಾರಣವಾದ ಪ್ರಭುತ್ವದ ಜನವಿರೋಧಿ ನಡವಳಿಕೆಗಳಿಗೆ ಸಹಕರಿಸುವುದು ಜನದ್ರೋಹವಾಗುತ್ತದೆ. ಜವಾಬ್ದಾರಿ ವಿರೋಧ ಪಕ್ಷವಾಗಿ ನಾವು ಜನರ ಪರ, ಸರಕಾರದ ಪರ ಅಲ್ಲ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News