ಅಧಿಕಾರಿಗಳು, ಸಿಬ್ಬಂದಿಗಳು ಸಂವೇದನಾಶೀಲರಾಗಿ ನಡೆದುಕೊಳ್ಳಬೇಕು: ಡಾ.ಸುಧಾಕರ್

Update: 2020-07-09 11:42 GMT

ಬೆಂಗಳೂರು, ಜು. 9: `ಕೋವಿಡ್-19 ಸೋಂಕಿನ ಬಿಕ್ಕಟ್ಟಿನ ಸಂದರ್ಭದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ನಿಯಮಗಳ ಅನುಸಾರವಾಗಿ ಮತ್ತು ಹೆಚ್ಚು ಸಂವೇದನಾಶೀಲರಾಗಿ ನಡೆದುಕೊಳ್ಳಬೇಕು. ಜನರಿಗೆ ಆದಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವ್ಯವಹರಿಸುವುದು ಅತ್ಯಗತ್ಯ' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದಿಲ್ಲಿ ನಿರ್ದೇಶನ ನೀಡಿದ್ದಾರೆ.

ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, ಕೋವಿಡ್-19 ಪರೀಕ್ಷಾ ವರದಿ ವಿಳಂಬದ ಹಿನ್ನೆಲೆಯಲ್ಲಿ ಎಸೆಸೆಲ್ಸಿ ವಿದ್ಯಾರ್ಥಿ ಸೋಂಕಿನ ಭೀತಿಯಲ್ಲಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಸಂಪೂರ್ಣ ವಿವರಗಳನ್ನು ಪರಿಶೀಲಿಸಲಾಗುವುದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದು ನಿಶ್ಚಿತ' ಎಂದು ಇದೇ ವೇಳೆ ತಿಳಿಸಿದ್ದಾರೆ.

ಕೋವಿಡ್-19 ಸೋಂಕಿನ ಪ್ರಕರಣಗಳ ಏರಿಕೆ ಹಿನ್ನೆಲೆಯಲ್ಲಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಗರ್ಭಿಣಿ ಮಹಿಳೆಯರಿಗೆ ಹೆಚ್ಚು ಸುರಕ್ಷತೆಯಲ್ಲಿ ಹೆರಿಗೆಗೆ ಅನುಕೂಲ ಒದಗಿಸಲು ಓಟಿ ಸೌಲಭ್ಯಗಳನ್ನು ಹೊಂದಿರುವ 24 ಹಾಸಿಗೆಗಳ ವಿಲ್ಸನ್ ಗಾರ್ಡನ್ ಹೆರಿಗೆ ಆಸ್ಪತ್ರೆಯಲ್ಲಿ ಕೋವಿಡ್ ಶಂಕಿತ ಗರ್ಭಿಣಿ ಮಹಿಳೆಯರ ಚಿಕಿತ್ಸೆಗೆ ನಿಗದಿ ಮಾಡಲಾಗಿದೆ' ಎಂದು ಸುಧಾಕರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News