ವಿವಿಧ ಬೇಡಿಕೆಗಳಿಗೆ ಒತ್ತಾಯ: ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಎಐಎಂಎಸ್ಸೆಸ್ ಬೆಂಬಲ

Update: 2020-07-09 11:47 GMT

ಬೆಂಗಳೂರು, ಜು.9: ಕೋವಿಡ್ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಜು.10ರಿಂದ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ಧಿಷ್ಟ ಹೋರಾಟಕ್ಕೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಬೆಂಬಲಿಸಲಿದೆ ಎಂದು ಸಂಘಟನೆಯ ಕಾರ್ಯದರ್ಶಿ ಶಾಂತಾ ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳಾದ ಮಾಸಿಕ ಕನಿಷ್ಠ 12 ಸಾವಿರ ರೂ. ಗೌರವಧನ, ಕೋವಿಡ್-19ರ ಕಾರ್ಯನಿರ್ವಹಣೆಗೆ ಅಗತ್ಯವಿರುವಷ್ಟು ಸುರಕ್ಷತಾ ಸಾಮಗ್ರಿಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ಅನಿರ್ಧಿಷ್ಟ ಹೋರಾಟಕ್ಕೆ ಮುಂದಾಗಿದ್ದಾರೆ. ಈ ಬೇಡಿಕೆಗಳು ನ್ಯಾಯ ಸಮ್ಮತವಾಗಿದ್ದು, ಈಡೇರಿಡಲು ಸಾಧ್ಯವಾಗುವಂತಹದ್ದು ಹಾಗೂ ಅಗತ್ಯವಿರುವಂತಹದ್ದಾಗಿವೆ.

ರಾಜ್ಯಾದ್ಯಂತ 42 ಸಾವಿರ ಮಂದಿ ಆಶಾ ಕಾರ್ಯಕರ್ತೆಯರು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನರ ಮಧ್ಯೆ ತಳಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಜನರ ಮನೆ ಬಾಗಿಲಿಗೆ ಹೋಗಿ ಆರೋಗ್ಯದ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಇಂತಹ ಅಗತ್ಯವಿರುವ ಸೇವೆಯಲ್ಲಿ ತೊಡಗಿರುವ ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಳ ಹಾಗೂ ಕೋವಿಡ್-19 ಸುರಕ್ಷಿತ ಸಾಮಗ್ರಿಗಳನ್ನು ಒದಗಿಸುವುದು ಸರಕಾರದ ಕರ್ತವ್ಯವೆಂದು ಎಐಎಂಎಸ್ಸೆಸ್ ಪ್ರಕಟನೆಯ ಮೂಲಕ ಒತ್ತಾಯಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News