ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

Update: 2020-07-09 14:29 GMT

ಮಂಗಳೂರು, ಜು.9: ಪರಿಶಿಷ್ಟ ಪಂಗಡದ ಯುವಕ, ಯುವತಿಯರು ಪರಿಶಿಷ್ಟ ಪಂಗಡ ಸಮುದಾಯದ ಒಳಗೆ ಅಂತರ್ಜಾತಿ ವಿವಾಹವಾದಲ್ಲಿ ಪ್ರೋತ್ಸಾಹಧನ ಮಂಜೂರಾತಿಗೆ ಅರ್ಜಿ ಆಹ್ವಾನಿಸಿದೆ.

ಯುವತಿಗೆ ಕನಿಷ್ಠ 18 ವರ್ಷ, ಗರಿಷ್ಠ 42 ವರ್ಷ, ಯುವಕನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷವಾಗಿರಬೇಕು. ವಾರ್ಷಿಕ ಆದಾಯ 2 ಲಕ್ಷ ರೂ. ಮೀರಬಾರದು. ಮದುವೆಯಾದ ಒಂದು ವರ್ಷದ ಅವಧಿಯೊಳಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದು.

ಸುಳ್ಳು ಮಾಹಿತಿ ಹಾಗೂ ನಕಲಿ ದಾಖಲೆ ಸಲ್ಲಿಸಿದಲ್ಲಿ ಮಂಜೂರಾದ ಹಣವನ್ನು ಸರಕಾರ ವಾಪಸ್ ಕಟ್ಟುವ ಬಗ್ಗೆ ಮತ್ತು ಶಿಕ್ಷೆಗೆ ಒಳಪಡಲು ಸಿದ್ಧರಿರುವ ಬಗ್ಗೆ ಪ್ರಮಾಣಪತ್ರವನ್ನು 20 ರೂ. ಛಾಪಾ ಕಾಗದದಲ್ಲಿ ಬರೆದು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಬಂಟ್ವಾಳ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಥವಾ ದೂ.ಸಂ.: 08255- 230986ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News