ಸಿಬಿಎಸ್‍ಇ ಪಠ್ಯಕ್ರಮ ಪರಿಷ್ಕರಣೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ಷೇಪ

Update: 2020-07-09 15:29 GMT

ಬೆಂಗಳೂರು, ಜು.9: ಸಿಬಿಎಸ್‍ಇ 11ನೆ ತರಗತಿಯ ಪಠ್ಯಕ್ರಮದಿಂದ ಪೌರತ್ವ, ಜಾತ್ಯತೀತತೆ ಮತ್ತು ಒಕ್ಕೂಟ ವ್ಯವಸ್ಥೆ ಕುರಿತ ಅಧ್ಯಾಯಗಳನ್ನು ಕೈ ಬಿಟ್ಟಿರುವ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ಕ್ರಮಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಪೌರತ್ವ, ಜಾತ್ಯತೀತತೆ ಮತ್ತು ಒಕ್ಕೂಟ ವ್ಯವಸ್ಥೆ ಕುರಿತ ಅಧ್ಯಾಯಗಳನ್ನು ಸಿಬಿಎಸ್‍ಇ 11ನೆ ತರಗತಿಯ ಪಠ್ಯಕ್ರಮದಿಂದ ಕೈ ಬಿಡಲಾಗಿದೆ. ಬಿಜೆಪಿಯು ಈ ತತ್ವಗಳನ್ನು ನಂಬುವುದಿಲ್ಲ ಮತ್ತು ತನ್ನ ಹಿಂದಿನ ನಡವಳಿಕೆಗಳನ್ನು ಮೌಲ್ಯೀಕರಿಸುತ್ತದೆ ಎಂಬುದಾಗಿ ಇದು ವಿವರಿಸುತ್ತದೆ ಎಂದು ಟೀಕಿಸಿದ್ದಾರೆ.

ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಪೌರತ್ವ, ಜಾತ್ಯತೀತತೆ ಮತ್ತು ಒಕ್ಕೂಟ ವ್ಯವಸ್ಥೆ ಕುರಿತ ಅಧ್ಯಾಯಗಳನ್ನು ಕೈ ಬಿಟ್ಟಿರುವ ನಿರ್ಧಾರವನ್ನು ಖಂಡಿಸುತ್ತೇನೆ. ಪ್ರಜಾಪ್ರಭುತ್ವದ ಆಧಾರ ಸ್ತಂಭಗಳನ್ನು ಅರ್ಥ ಮಾಡಿಕೊಳ್ಳಲು ಬಯಸುವ ಒಂದು ಪೀಳಿಗೆಯ ವಿದ್ಯಾರ್ಥಿಗಳನ್ನು ಈ ನಿರ್ಧಾರ ವಂಚಿಸಲಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News