ಜು.10 ರಿಂದ ನಾಗರಹೊಳೆ, ಬಂಡೀಪುರ ಸಫಾರಿ ನಿರ್ಬಂಧ: ಮೈಸೂರು ಜಿಲ್ಲಾಧಿಕಾರಿ ಆದೇಶ

Update: 2020-07-09 16:06 GMT
ಸಾಂದರ್ಭಿಕ ಚಿತ್ರ

ಮೈಸೂರು,ಜು.9: ಮೈಸೂರು ಜಿಲ್ಲೆಯಲ್ಲಿ ದಿನೇ ದಿನೇ ಕೊರೋನ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ನಾಗರಹೊಳೆ, ಬಂಡೀಪುರ ಸಫಾರಿ ಬಂದ್ ಮಾಡಿ  ಮೈಸೂರು ಡಿಸಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.

ಜುಲೈ 10ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರಿಗೆ ಹೆಚ್.ಡಿ ಕೋಟೆ ತಾಲೂಕಿನ ಎಲ್ಲಾ ಹೋಟೆಲ್, ರೆಸಾರ್ಟ್ ಲಾಡ್ಜ್ ಹೋಂ ಸ್ಟೇಗಳಲ್ಲಿ ವಸತಿ ಸೌಕರ್ಯ ನೀಡುವಂತಿಲ್ಲ. ಹೊಸ ಪ್ರವಾಸಿಗರಿಗೆ ಬುಕಿಂಗ್ ಮಾಡಿಕೊಳ್ಳದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಎಚ್.ಡಿ ಕೋಟೆ ವ್ಯಾಪ್ತಿಗೆ ಒಳಪಡುವ ಬಂಡೀಪುರ, ನಾಗರಹೊಳೆ ಅರಣ್ಯ ವ್ಯಾಪ್ತಿಯ ಸಫಾರಿಗಳಿಗೆ ನಿರ್ಬಂಧ ವಿಧಿಸಲಾಗಿದೆ. ಹೊರಗಿನ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News