ದಮಾಮ್‌ನಿಂದ ಮಂಗಳೂರಿಗೆ ಆಗಮಿಸಿದ ಕೆಸಿಎಫ್‌ನ ಚಾರ್ಟರ್ಡ್ ವಿಮಾನ

Update: 2020-07-09 17:06 GMT

ಮಂಗಳೂರು, ಜು.9: ದಮಾಮ್‌ನಲ್ಲಿ ಸಂಕಷ್ಟಕ್ಕೊಳಗಾಗಿರುವ ಕನ್ನಡಿಗರನ್ನು ತಾಯ್ನಾಡಿಗೆ ಕರೆತರುವ ಭಾಗವಾಗಿ ಅನಿವಾಸಿ ಕನ್ನಡಿಗರ ಸಂಘಟನೆ ಕರ್ನಾಟಕ ಕಲ್ಚರಲ್ ಫೌಂಡೇಶನ್(ಕೆಸಿಎಫ್) ಆಯೋಜಿಸಿದ ಚಾರ್ಟರ್ಡ್ ವಿಮಾನವು ಮಂಗಳೂರು ವಿಮಾನ ನಿಲ್ದಾಣಕ್ಕೆ ಗುರುವಾರ ಸಂಜೆ ಬಂದಿಳಿದಿದೆ.

ರೋಗಿಗಳು, ಗರ್ಭಿಣಿ ಮತ್ತು ಮಕ್ಕಳು ಸಹಿತ 188 ಪ್ರಯಾಣಿಕರಿದ್ದ ಸ್ಪೈಸ್‌ಜೆಟ್ ಚಾರ್ಟರ್ಡ್ ವಿಮಾನವು ಸುರಕ್ಷಿತವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂಜೆ 7 ಗಂಟೆ ಸುಮಾರಿಗೆ ಲ್ಯಾಂಡ್ ಆಗಿದೆ. ಎಲ್ಲರನ್ನೂ ಖಾಸಗಿ ಹೊಟೇಲ್‌ನಲ್ಲಿ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ ಎಂದು ವಿಮಾನ ನಿಲ್ದಾಣದ ನೋಡಲ್ ಅಧಿಕಾರಿ ಯತೀಶ್ ಉಳ್ಳಾಲ್ ತಿಳಿಸಿದ್ದಾರೆ.

ಕೊರೋನ ಸೋಂಕಿನ ಅಟ್ಟಹಾಸಕ್ಕೆ ಸಿಲುಕಿ ಕೆಲಸ ಕಳೆದುಕೊಂಡ ಅನಿವಾಸಿ ಕನ್ನಡಿಗರ ಸಮಸ್ಯೆ ಅರಿತು ಸಂಕಷ್ಟದಲ್ಲಿರುವವರಿಗೆ ಕೆಸಿಎಫ್ ಕಾರ್ಯಕರ್ತರು ಕಿಟ್ ವ್ಯವಸ್ಥೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News