ನೇಪಾಳದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

Update: 2020-07-10 05:47 GMT

ಕಠ್ಮಂಡು, ಜು.10: ನೇಪಾಳದ ಪ್ರಮುಖ ನದಿಗಳ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ನದಿಗಳಲ್ಲಿ ಪ್ರವಾಹ ಉಂಟಾಗಿದ್ದು, ತಗ್ಗುಪ್ರದೇಶದಲ್ಲಿರುವ ಗ್ರಾಮಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ಗುರುವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶದಲ್ಲಿರುವ ಗ್ರಾಮಗಳ ಜನರು ಜಾನುವಾರುಗಳು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಇಲ್ಲಿನ ನದಿಗಳಾದ ಕಮ್ಲಾ, ಬಾಗ್ಮತಿ, ಗಂಡಕ್ ಹಾಗೂ ಕೋಸಿ ನದಿಗಳ ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ. ಈ ಕಾರಣದಿಂದ ನದಿಗಳು ತುಂಬಿ ಹರಿಯುತ್ತಿವೆ. ಅಲ್ಲದೆ ಪ್ರವಾಹ ಉಂಟಾಗಿ, ಕೆಲವು ಮನೆಗಳು ಪ್ರವಾಹಕ್ಕೆ ಕೊಚ್ಚಿಹೋಗಿವೆ. ನೇಪಾಳದಲ್ಲಿ ಶುಕ್ರವಾರ, ಶನಿವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಅಲ್ಲಿನ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News