ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಮತ್ತಿಬ್ಬರು ಬಲಿ

Update: 2020-07-10 06:27 GMT
ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು, ಜು.10: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ 19 ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯ 62 ವರ್ಷದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಮುಂಜಾನೆ 3.30ರ ವೇಳೆಯಲ್ಲಿ ಸಾವನ್ನಪ್ಪಿದ್ದು, ಇವರಿಗೆ ಜ.2ರಂದು ಕೊರೋನ ಸೋಂಕು ಕಾಣಿಸಿಕೊಂಡಿತ್ತು. 

ಇವರು ಶುಗರ್, ಉಸಿರಾಟ ತೊಂದರೆ ಖಾಯಿಲೆಯಿಂದ ಬಳಲುತ್ತಿದ್ದರು ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಕಾರವಾರ: ಕೊರೋನ ಸೋಂಕಿಗೆ ಇಲ್ಲಿನ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 77 ವರ್ಷದ ವೃದ್ಧೆ ತಡರಾತ್ರಿ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. 

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಲ್ಲಿನ ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೋನ ಲಕ್ಷಣ ಕಂಡುಬಂದಿದ್ದರಿಂದ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಕೋವಿಡ್ ವರದಿ ಪಾಸಿಟಿವ್ ಬಂದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

ಇನ್ನು ಕಾರವಾರದ ಹೈಚರ್ಚ್ ಬಳಿಯ ಸ್ಮಶಾನದಲ್ಲಿ ಮಹಿಳೆಯ‌ ಅಂತ್ಯ ಸಂಸ್ಕಾರಕ್ಕೆ ಮುಂದಾಗಿದ್ದಾಗ ಸ್ಥಳೀಯರು ಅಡ್ಡಿ ಮಾಡಿದ್ದರು. ಮೊದಲೇ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದರಿಂದ ಲಘು ಲಾಠಿ‌‌ ಚಾರ್ಜ್ ಮಾಡಿ ಜನರನ್ನು ಚದುರಿಸಲಾಯಿತು. ಬಳಿಕ ಅಲ್ಲೇ ಅಂತ್ಯ ಸಂಸ್ಕಾರ ಮಾಡಲಾಯಿತು ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News