ಪಾತಕಿ ರವಿ ಪೂಜಾರಿ ವಿರುದ್ಧ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಸಿದ ಸಿಸಿಬಿ

Update: 2020-07-10 10:58 GMT

ಬೆಂಗಳೂರು, ಜು.10: ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಮತ್ತೊಂದು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.

2009ನೇ ಸಾಲಿನ ಇಂದಿರಾನಗರದ ಬಳಿ ವಾಸ ಮಾಡುತ್ತಿದ್ದ ಖಾಸಗಿ ವಾಹಿನಿ ಮಾಲಕ ಝಮಾಲ್ ಎಂಬುವರಿಗೆ ಕರೆ ಮಾಡಿ ರವಿ ಪೂಜಾರಿ ಹಣಕ್ಕೆ ಬೇಡಿಕೆಯಿಟ್ಟಿದ್ದ. ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ರವಿ ಪೂಜಾರಿ ತನ್ನ ಸಹಚರರನ್ನು ಕಳುಹಿಸಿ ಹಲ್ಲೆ ನಡೆಸಿದ್ದ. ಈ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ನಂತರ ಹೆಚ್ಚಿನ ತನಿಖೆಗೆ ಸಿಸಿಬಿಗೆ ವರ್ಗಾವಣೆಯಾಗಿತ್ತು.

ಪೊಲೀಸರು ರವಿ ಪೂಜಾರಿಯನ್ನು ವಿಚಾರಣೆಗೊಳಪಡಿಸಿದಾಗ ಖಾಸಗಿ ವಾಹಿನಿ ಮಾಲಕನ ಮೇಲೆ ನಡೆದ ಹಲ್ಲೆ ಹಾಗೂ ಬೆದರಿಕೆ ವಿಚಾರ ಕುರಿತು ಬಾಯ್ಬಿಟ್ಟಿದ್ದ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News