ಬೆಡ್ ನೀಡಲು ನಿರಾಕರಿಸಿದ 46 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ನೋಟಿಸ್

Update: 2020-07-10 12:13 GMT

ಬೆಂಗಳೂರು, ಜು.10: ನಗರದ 46 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ನೋಟಿಸ್ ಜಾರಿಗೊಳಿಸಿದೆ.

ಕೊರೋನ ಸೋಂಕಿತರಿಗೆ ತಕ್ಷಣ ಬೆಡ್ ನೀಡದ ಕಾರಣ ಹಾಗೂ ಬಿಬಿಎಂಪಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ 46 ಖಾಸಗಿ ಆಸ್ಪತ್ರೆಗಳ ವಿರುದ್ಧ ನೋಟಿಸ್ ನೀಡಲಾಗಿದೆ.

ಕೊರೋನ ಸೋಂಕಿತರಿಗೆ ಖಾಸಗಿ ಆಸ್ಪತ್ರೆಯಲ್ಲಿ ಶೇ.50ರಷ್ಟು ಬೆಡ್ ಮೀಸಲು ಇಡಬೇಕು ಎಂದು ಸರಕಾರ ಆದೇಶ ನೀಡಿದೆ. ಆದರೆ, ಕೊರೋನ ಸೋಂಕಿತರಿಗೆ ಬೆಡ್ ಇಲ್ಲ ಎಂದು ನಗರದ ಖಾಸಗಿ ಆಸ್ಪತ್ರೆಗಳು ಹೇಳುತ್ತಿವೆ. ಹೀಗಾಗಿ ಕೊರೋನ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ದಾಖಲಿಸಲು ಮತ್ತು ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಒಟ್ಟು 46 ಆಸ್ಪತ್ರೆಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News