ದ.ಕ ಜಿಲ್ಲೆಯಲ್ಲಿ ಶುಕ್ರವಾರ 6 ಮಂದಿ ಕೊರೋನ ಸೋಂಕಿತರು ಸಾವು

Update: 2020-07-10 15:45 GMT
ಸಾಂದರ್ಭಿಕ ಚಿತ್ರ

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಆರ್ಭಟಕ್ಕೆ ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಆರು ಮಂದಿ ಕೋವಿಡ್ 19 ಸೋಂಕಿತರು ಸಾವನ್ನಪ್ಪಿದ್ದಾರೆ.

ಮಂಗಳೂರಿನ ಕೋವಿಡ್ ವೆನ್ಲಾಕ್ ಆಸ್ಪತ್ರೆಯಲ್ಲಿ ನಾಲ್ವರು ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಮಂಗಳೂರಿನ ತೊಕ್ಕೊಟ್ಟುವಿನ 58 ವರ್ಷದ ಮಹಿಳೆ, ಫಳ್ನೀರ್ ನ 65 ವರ್ಷದ ಪುರುಷ, ಉಳ್ಳಾಲದ 67 ವರ್ಷದ ಪುರುಷ, ಹೊಸ ಬೆಟ್ಟುವಿನ 35 ವರ್ಷದ ಯುವಕ ಸಾವನ್ನಪ್ಪಿದವರು. ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News