ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಸಂಭಾವನೆಯನ್ನು ನೀಡಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಆಗ್ರಹ

Update: 2020-07-10 13:59 GMT

ಉಡುಪಿ, ಜು.10: ಕೋವಿಡ್-19 ಸೋಂಕಿತರು ಹಾಗೂ ಪಾಸಿಟಿವ್ ಇರುವವರೊಂದಿಗೆ ಸದಾ ಒಡನಾಟದಲ್ಲಿರುವ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ನ್ಯಾಯಯುತವಾದ ಬೇಡಿಕೆಗಳನ್ನು ಸರಕಾರ ಮನ್ನಿಸಿ ಅವರಿಗೆ ಸೂಕ್ತ ಭತ್ಯೆಯನ್ನು ನೀಡುವ ಮೂಲಕ ಅವರಿಗೆ ಸೂಕ್ತ ಗೌರವ ಸಲ್ಲಿಸಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಒತ್ತಾಯಿಸಿದೆ.

ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ವಾರ್ಡ್ ಮತ್ತು ಗ್ರಾಮ ಮಟ್ಟದಲ್ಲಿ ಜನರ ನೇರ ಸಂಪರ್ಕದಲ್ಲಿರುವರಾಗಿದ್ದು, ಕೋವಿಡ್-19ರ ಹಿನ್ನೆಲೆಯಲ್ಲಿ ಮನೆಮನೆಗೆ ಭೇಟಿ ನೀಡಿ ಮಾಹಿತಿಗಳನ್ನು ಸಂಗ್ರಹಿಸುತ್ತಾರೆ.ಇದರೊಂದಿಗೆ ಸೋಂಕಿತರ ಕುರಿತಂತೆಯೂ ಮೇಲಾಧಿಕಾರಿಗಳಿಗೆ ಮಾಹಿತಿ ನೀಡುವ ಇವರಿಗೆ ಸೋಂಕು ತಗಲುವ ಆತಂಕ ಹಾಗೂ ಭಯ ಸದಾ ಇದ್ದೇ ಇರುತ್ತದೆ.

ಆದರೂ ಅವರು ತಮ್ಮ ಆರೋಗ್ಯವನ್ನು ಲೆಕ್ಕಿಸದೇ, ಜನರ ಆರೋಗ್ಯ ಕಾಪಾಡುವ ಆರೋಗ್ಯ ರಾಯಭಾರಿಗಳಾಗಿದ್ದಾರೆ. ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವುದು ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರಕಾರದ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯೂ ಆಗಿದೆ.

ಆದ್ದರಿಂದ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಶೀಘ್ರವೇ ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News