ಕ್ರೀಡಾ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ

Update: 2020-07-10 14:36 GMT

ಮಂಗಳೂರು, ಜು.10: ರಾಜ್ಯ ಸರಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು 8ರಿಂದ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಮಟ್ಟದ ಕ್ರೀಡೆಯಲ್ಲಿ ಚಿನ್ನದ ಪದಕ/ ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸೇವಾ ಸಿಂಧು ಮೂಲಕ ಆನ್‌ಲೈನ್‌ನಲ್ಲಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳ ಕ್ರೀಡಾಂಗಣ, ಮಂಗಳೂರು ಅಥವಾ ದೂ.ಸಂ.: 0824- 2451264ನ್ನು ಸಂರ್ಪಕಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News