ಮಡಿವಾಳ ಸಮಾಜ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ

Update: 2020-07-10 14:38 GMT

ಮಂಗಳೂರು, ಜು.10: ಪ್ರಸಕ್ತ 2020-21ನೇ ಸಾಲಿನಲ್ಲಿ ಮಡಿವಾಳ ಸಮಾಜಕ್ಕೆ ಸೇರಿದವರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಗಸ, ಚಕಲ, ಧೋಬಿ, ಮಡಿವಾಳ, ಮನ್ನನ್, ಪರಿತ್, ರಾಜಕ, ಸಕಲ, ವನ್ನನ್, ವೆಲ್ಲುತೇಡನ್, ಸಾಕಲವಾಡು ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವ-ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಲ್ಲಿ ಸಾಲ ಮತ್ತು ಸಹಾಯಧನದ ಸೌಲಭ್ಯ ಪಡೆಯಬಹುದು.

ಅರ್ಹರು ಅಗತ್ಯ ದಾಖಲಾತಿಗಳೊಂದಿಗೆಮತ್ತು ಸಣ್ಣ ರೈತರ ಪ್ರಮಾಣ ಪತ್ರಗಳನ್ನು ನಿಗಮದ ವೆಬ್‌ಸೈಟ್ www.dbcdc.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನೇರವಾಗಿ ಅಗತ್ಯ ದಾಖಲೆಗಳೊಂದಿಗೆ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು ಕಚೇರಿಗೆ ಆ.3ರೊಳಗೆ ಸಲ್ಲಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News