ಉಡುಪಿ: ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಆರೋಗ್ಯ ಸೇವೆ ಸ್ಥಗಿತ

Update: 2020-07-10 14:50 GMT

ಉಡುಪಿ, ಜು.10: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲೆಯಾದ್ಯಂತ ಇಂದು ತಮ್ಮ ಆರೋಗ್ಯ ಸೇವೆಯನ್ನು ಸ್ಥಗಿತಗೊಳಿಸಿ ರುವ ಆಶಾ ಕಾರ್ಯಕರ್ತೆಯರು, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ(ಎಐಯುಟಿಯುಸಿ) ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಈ ಕುರಿತ ಮನವಿಯನ್ನು ಜಿಲ್ಲಾ ಮತ್ತು ಕುಟುಂಬ ಕಲ್ಯಾಣಾಧಿ ಕಾರಿಗಳಿಗೆ ಸಲ್ಲಿಸಿದ್ದಾರೆ.

ಕೊರೋನ ಹೋರಾಟದಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಅಪಾರ. ಆದರೆ ಕೊರೋನ ನಿಯಂತ್ರಣ ಕಾರ್ಯದಲ್ಲಿ ನಿರತರಾಗಿರುವ ಆಶಾ ಕಾರ್ಯ ಕರ್ತೆಯರು ವೇತನ, ರಕ್ಷಣೆ ಇಲ್ಲದೆ ಹಾಗೂ ಸಾಫ್ಟ್‌ವೇರ್ ಅವ್ಯವಸ್ಥೆಯಿಂದ ಬಳಲಿ ಬೆಂಡಾಗಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12ಸಾವಿರ ರೂ. ಗೌರವಧನ ಖಾತರಿಪಡಿಸಬೇಕು. ಕೋವಿಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯ ಇರುವಷ್ಟು ಸುರಕ್ಷಣಾ ಸಾಮಾಗ್ರಿಗಳನ್ನು ನೀಡಬೇಕು. ಕೋವಿಡ್-19ಗೆ ತುತ್ತಾದ ಆಶಾ ಕಾರ್ಯಕರ್ತೆಯರಿಗೆ ಪರಿಹಾರ ಹಾಗೂ ಸಂಪೂರ್ಣ ಚಿಕಿತ್ಸೆಯನ್ನು ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷೆ ಭಾರತಿ ಮೂಡಬೆಟ್ಟು, ಕಾರ್ಯ ದರ್ಶಿ ಕಲ್ಪನಾ, ಉಪಾಧ್ಯಕ್ಷೆ ವಂದನಾ, ಸತ್ಯಪ್ರಭಾ, ನಾಗರತ್ನ ಕುಂದಾಪುರ, ಚಂದ್ರಕಲಾ, ಶೋಭಾ ಭಂಡಾರಿ, ಆಶಾ ಜಿ.ನಾಯಕ್, ಹಿಮಾ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News