ದ.ಕ. ಜಿಲ್ಲೆಯಲ್ಲಿ ಕೋವಿಡ್-19‌ಗೆ ಎಂಟು ಬಲಿ: ಮೃತರ ಸಂಖ್ಯೆ 38ಕ್ಕೇರಿಕೆ

Update: 2020-07-10 15:07 GMT

ಮಂಗಳೂರು, ಜು. ದ.ಕ. ಜಿಲ್ಲೆಯಲ್ಲಿ ಕೊರೋನ ಆರ್ಭಟಕ್ಕೆ ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ. ಕೊರೋನದಿಂದಾಗಿ ಮರಣ ಮೃದಂಗ ಮುಂದುರಿದಿದ್ದು, ಜಿಲ್ಲೆಯಲ್ಲಿ ಎಂಟು ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ಮಧುಮೇಹ ಯಕೃತ್, ಸಿರೋಸಿಸ್‌ನಿಂದ ಬಳಲುತ್ತಿದ್ದ 68 ವರ್ಷದ ವೃದ್ಧ ಜು.8ರಂದು ಮೃತಪಟ್ಟಿದ್ದರು. 

ಇನ್ನು ಸ್ಥೂಲಕಾಯದಿಂದ ಬಳಲುತ್ತಿದ್ದ 35 ವರ್ಷದ ಯುವಕ, ಕಿಡ್ನಿ ವೈಫಲ್ಯ, ಹೃದಯ ಸಂಬಂಧಿ ಕಾಯಿಲೆ, ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ 67 ವರ್ಷದ ವೃದ್ಧ, ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ 57 ವರ್ಷದ ಪುರುಷ, ಸೆಪ್ಟಿಸೆಮಿಯಾ ಸಹಿತ ಬಹುಅಂಗಾಂಗ ವೈಫಲ್ಯತೆಯಿಂದ ಬಳಲುತ್ತಿದ್ದ 55 ವರ್ಷದ ಪುರುಷ ಜು.9ರಂದು ಮೃತಪಟ್ಟಿದ್ದರು.

ಮಧುಮೇಹ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದ 65 ವರ್ಷದ ವೃದ್ಧ, ಮಧುಮೇಹ, ಕಿಡ್ನಿ ವೈಫಲ್ಯ, ಹೃದಯಸಂಬಂಧಿ ಕಾಯಿಲೆ, ತೀವ್ರ ಪ್ರತಿರೋಧಕ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ 48 ವರ್ಷದ ಪುರುಷ, ಮಧುಮೇಹದಿಂದ ಬಳಲುತ್ತಿದ್ದ 58 ವರ್ಷದ ಮಹಿಳೆಯು ಶುಕ್ರವಾರ ಮೃತಪಟ್ಟಿದ್ದಾರೆ.

ಜು.8ರಿಂದ ಜು.10ರವರೆಗೆ ಮೃತಪಟ್ಟವರ ಪಾಸಿಟಿವ್ ವರದಿಯು ಶುಕ್ರವಾರ ಬಂದಿದೆ. ಈ ಮೂಲಕ ಕೊರೋನದಿಂದ ಮೃತಪಟ್ಟವರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News