ಶಿರ್ವದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆಗೆ ಚಾಲನೆ

Update: 2020-07-10 15:19 GMT

ಶಿರ್ವ, ಜು.10: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿರ್ವ ಸಮುದಾಯ ಆರೋಗ್ಯ ಕೇಂದ್ರ, ಶಿರ್ವ ರೋಟರಿ ಕ್ಲಬ್‌ಗಳ ಸಹಭಾಗಿತ್ವದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮವನ್ನು ಗುರುವಾರ ಸಮುದಾಯ ಆರೋಗ್ಯ ಕೇಂದ್ರದ ಸೆಮಿನಾರ್ ಹಾಲ್‌ನಲ್ಲಿ ಏರ್ಪಡಿಸಲಾಗಿತ್ತು.

ಕಾರ್ಯಕ್ರಮವನ್ನು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿ ಕಾರಿ ಡಾ.ಸಂತೋಷ್ ಕುಮಾರ್ ಬೈಲೂರು ಉದ್ಘಾಟಿಸಿದರು. ಕೇಂದ್ರದ ವೈದ್ಯಾಧಿಕಾರಿ ಡಾ.ಸುಬ್ರಹ್ಮಣ್ಯ ರಾವ್, ಮಲೇರಿಯಾದ ಹರಡುವಿಕೆ, ಸೊಳ್ಳೆಗಳ ನಿಯಂತ್ರಣ, ಮುಂಜಾಗ್ರತೆ ಕ್ರಮದ ಬಗ್ಗೆ ಮಾಹಿತಿ ನೀಡಿ, 2025ರಲ್ಲಿ ಕೇಂದ್ರ ಸರಕಾರ ಮಲೇರಿಯಾ ಮುಕ್ತ ರಾಷ್ಟ್ರ ಮಾಡುವ ಸಂಕಲ್ಪ ಹೊಂದಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರ ಸಹಾಗಿತ್ವ ಅತೀ ಅಗತ್ಯವಾಗಿದೆ ಎಂದರು.

ಅಧ್ಯಕ್ಷತೆಯನ್ನು ಶಿರ್ವ ರೋಟರಿ ಅಧ್ಯಕ್ಷ ವಿಷ್ಣುಮೂರ್ತಿ ಸರಳಾಯ ವಹಿಸಿದ್ದರು. ಕಾರ್ಯದರ್ಶಿ ಆಲ್ವಿನ್ ಅಮಿತ್ ಅರಾನ್ನ, ರೋಟರಿ ಪೂರ್ವಾ ಧ್ಯಕ್ಷ ಮಥಾಯಸ್ ಲೋಬೊ, ಹಿರಿಯ ಆರೋಗ್ಯ ಸಹಾಯಕಿ ಸರಳಾ, ಕಿರಿಯ ಆರೋಗ್ಯ ಸಹಾಯಕಿಯರಾದ ಶಶಿ, ಲೀನಾ, ಕಲ್ಪನಾ, ಸಿಸಿಲಿಯಾ, ಸುಧಾ ಉಪಸ್ಥಿತರಿದ್ದರು. ಕಿರಿಯ ಆರೋಗ್ಯ ಸಹಾಯಕಿ ಗೀತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News