ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯಗೊಳಿಸಿಲ್ಲ: ಹೈಕೋರ್ಟ್ ಗೆ ಕೇಂದ್ರದ ಹೇಳಿಕೆ

Update: 2020-07-10 17:54 GMT

ಬೆಂಗಳೂರು, ಜು.10: ಕೊರೋನ ಹಿನ್ನೆಲೆಯಲ್ಲಿ ಸೋಂಕಿತರನ್ನು ಪತ್ತೆ ಹಚ್ಚಲು ಆರೋಗ್ಯ ಸೇತು ಮೊಬೈಲ್ ಆ್ಯಪ್ ಬಳಕೆ ಕಡ್ಡಾಯಗೊಳಿಸಿ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಹೈಕೋರ್ಟ್ ಗೆ ಕೇಂದ್ರ ಗೃಹ ಸಚಿವಾಲಯ ಹೇಳಿಕೆ ನೀಡಿದೆ.

ಆರೋಗ್ಯ ಸೇತು ಮೊಬೈಲ್ ಆ್ಯಪ್ ಬಳಕೆ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಡಿಜಿಟಲ್ ವಲಯದಲ್ಲಿ ನಾಗರಿಕರ ಹಕ್ಕುಗಳ ರಕ್ಷಣೆಗೆ ಹೋರಾಟ ಮಾಡುತ್ತಿರುವ ಬೆಂಗಳೂರಿನ ಅನಿರ್ವ ಎ. ಅರವಿಂದ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಆರೋಗ್ಯ ಸೇತು ಮೊಬೈಲ್ ಆ್ಯಪ್ ಕಡ್ಡಾಯಗೊಳಿಸಿಲ್ಲ ಎಂದು ಕೇಂದ್ರ ಸರಕಾರದ ಪರ ವಕೀಲರು ಪೀಠಕ್ಕೆ ತಿಳಿಸಿದರು.

ಕೋವಿಡ್-19 ಹಿನ್ನೆಲೆಯಲ್ಲಿ ವಿಮಾನ ಪ್ರಯಾಣಿಕರಿಗೆ ಆರೋಗ್ಯ ಸೇತು ಮೊಬೈಲ್ ಆ್ಯಪ್ ಕಡ್ಡಾಯಗೊಳಿಸಲಾಗಿದೆ. ಇದರಿಂದ, ಸ್ಮಾರ್ಟ್‍ಫೋನ್ ಬಳಕೆ ಮಾಡದವರೊಂದಿಗೆ ತಾರತಮ್ಯ ಎಸಗಿದಂತಾಗುತ್ತದೆ. 14 ವರ್ಷದೊಳಗಿನವರಿಗೆ ವಿನಾಯಿತಿ ನೀಡಿದರೂ, ಅಂಗವಿಕಲರಿಗೆ ಈ ಆ್ಯಪ್ ಬಳಕೆ ಸ್ನೇಹಿ ಆಗಿಲ್ಲ. ಮುಖ್ಯವಾಗಿ ಕೇಂದ್ರ ಸರಕಾರದ ನಿರ್ಧಾರ ವ್ಯಕ್ತಿಯ ಖಾಸಗಿತನದ ಹಕ್ಕಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News