ಪಿಯುಸಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿ ನಡೆಸಲು ಶಿಕ್ಷಣ ಇಲಾಖೆ ಚಿಂತನೆ

Update: 2020-07-10 16:59 GMT

ಬೆಂಗಳೂರು, ಜು.10: ಶಾಲಾ ವಿದ್ಯಾರ್ಥಿಗಳಿಗೆ ಆನ್‍ಲೈನ್ ಶಿಕ್ಷಣ ನೀಡುವ ಸಂಬಂಧ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಪಿಯುಸಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳನ್ನು ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

2020-21ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಲಿಕೆಯಿಂದ ಹಿಂದುಳಿಯಬಾರದು ಎಂದು ಆನ್‍ಲೈನ್ ತರಗತಿಗಳನ್ನು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ ಎನ್ನಲಾಗಿದೆ.

ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಆನ್‍ಲೈನ್ ತರಗತಿಗಳಿಗೆ ಸಜ್ಜು ಮಾಡಬೇಕು. ವೇಳಾಪಟ್ಟಿ ರಚಿಸಿ ಮೊದಲೇ ಕಳುಹಿಸಬೇಕು. ವಿದ್ಯಾರ್ಥಿಗಳು ತರಗತಿಯಲ್ಲಿ ಪಾಲ್ಗೊಳ್ಳುವ ಜವಾಬ್ದಾರಿಯನ್ನು ಆಯಾ ಉಪನ್ಯಾಸಕರಿಗೆ ನೀಡಬೇಕು. ವಿದ್ಯಾರ್ಥಿಗಳಿಗೆ ಬೋಧನೆ ಮಧ್ಯೆ ಎದುರಾಗುವಂತಹ ಗೊಂದಲಗಳಿಗೆ ಪರಿಹಾರ ನೀಡಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಕೊರೋನ ಪ್ರಕರಣಗಳು ಸದ್ಯಕ್ಕೆ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ. ಈ ಮಧ್ಯೆ ವಿದ್ಯಾರ್ಥಿಗಳು ಕಲಿಕೆಯಿಂದ ದೂರ ಉಳಿಯಬಾರದು ಎಂಬ ಉದ್ದೇಶದಿಂದ ಆನ್‍ಲೈನ್‍ನಲ್ಲಿ ಶಿಕ್ಷಣ ನೀಡಲು ಮುಂದಾಗಿದ್ದೇವೆ. ಆಯ್ದ ಉಪನ್ಯಾಸಕರಿಂದ ಬೋಧನೆ ಚಿತ್ರೀಕರಣ ಮಾಡಿ ಯೂಟ್ಯೂಬ್‍ನಲ್ಲಿ ಅಪ್‍ಲೋಡ್ ಮಾಡುತ್ತೇವೆ. ಇದರ ಉಪಯೋಗವನ್ನು ವಿದ್ಯಾರ್ಥಿಗಳು ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದು ಇಲಾಖೆ ನಿರ್ದೇಶಕಿ ಕನಗವಲ್ಲಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News