ಬಾಕಿ ವೇತನ, ವಿಶೇಷ ಆರ್ಥಿಕ ಪ್ಯಾಕೇಜ್‍ಗಾಗಿ ಅತಿಥಿ ಉಪನ್ಯಾಸಕರಿಂದ ಆನ್‍ಲೈನ್ ಭಿತ್ತಿಪತ್ರ ಚಳವಳಿ

Update: 2020-07-10 17:48 GMT

ಬೆಂಗಳೂರು, ಜು.10: ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಮೂರು ಮುಖ್ಯ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಹೋರಾಟ ಸಮಿತಿಯ ನೇತೃತ್ವದಲ್ಲಿ ಆನ್‍ಲೈನ್‍ನಲ್ಲಿ ಭಿತ್ತಿಪತ್ರ ಚಳವಳಿ ನಡೆಸಲಾಯಿತು.

ಅತಿಥಿ ಉಪನ್ಯಾಸಕರ ಬಾಕಿ ಉಳಿದಿರುವ ವೇತನವನ್ನು ಒಂದೇ ಬಾರಿಗೆ ಈ ಕೂಡಲೇ ಪಾವತಿಸಬೇಕು, ಕೊರೋನ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರು ಮತ್ತು ಅತಿಥಿ ಶಿಕ್ಷಕರಿಗೆ ‘ಪರಿಹಾರ ಪ್ಯಾಕೇಜ್’ನ್ನು ಘೋಷಿಸಬೇಕು ಹಾಗೂ ಎಲ್ಲಾ ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಲಾಯಿತು.

ನಮ್ಮ ರಾಜ್ಯದಲ್ಲಿ ಈಗಾಗಲೇ 8 ಜನ ಅತಿಥಿ ಉಪನ್ಯಾಸಕರು ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಮತ್ತೊಬ್ಬ ಮಹಿಳಾ ಉಪನ್ಯಾಸಕಿ ಕ್ಯಾನ್ಸರ್ ನಿಂದ ಖಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹಲವರು ಗಂಭೀರ ಖಾಯಿಲೆಗಳಿಂದ ಬಳಲುತ್ತಿದ್ದು, ಆರ್ಥಿಕ ಮುಗ್ಗಟ್ಟಿನಿಂದ ಕುಗ್ಗಿಹೋಗಿದ್ದಾರೆ. ರಾಜ್ಯ ಸರಕಾರ ಈ ಕೂಡಲೇ ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ನೆರವಿಗೆ ಧಾವಿಸಬೇಕೆಂದು ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಹೋರಾಟ ಸಮಿತಿ ಆಗ್ರಹಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News