ಕೊರೋನ ಸೋಂಕು ಹಿನ್ನೆಲೆ: ಆರ್ ಟಿಒ ಕಚೇರಿ ಸೀಲ್‍ಡೌನ್

Update: 2020-07-10 17:51 GMT

ಬೆಂಗಳೂರು, ಜು.10: ಕೊರೋನ ಸೋಂಕು ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಇಲ್ಲಿನ ರಾಜಾಜಿನಗರದ ಆರ್‍ಟಿಒ ಕಚೇರಿಯನ್ನು ಸಂಪೂರ್ಣವಾಗಿ ಸೀಲ್‍ಡೌನ್ ಮಾಡಲಾಗಿದೆ.

ರಾಜಾಜಿನಗರದ ಆರ್‍ಟಿಒ ಕಚೇರಿಯ ಪ್ರಾದೇಶಿಕ ಸಾರಿಗೆ ಇಲಾಖೆ ಆಯುಕ್ತರಿಗೆ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಮೂರು ದಿನಗಳ ಕಾಲ ಆರ್‍ಟಿಒ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿದೆ. ಸೋಂಕಿತ ಅಧಿಕಾರಿಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರ ಬಗ್ಗೆ ಬಿಬಿಎಂಪಿ ಮಾಹಿತಿ ಕಲೆಹಾಕುತ್ತಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News