ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

Update: 2020-07-10 17:52 GMT

ಬೆಂಗಳೂರು, ಜು.10: ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟದ ಜತೆಗೆ ಕಾಂಗ್ರೆಸ್ ನಿಲ್ಲಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.

ರಾಮನಗರ ಹಾಗೂ ಕನಕಪುರ ಭಾಗದ ಆಶಾ ಕಾರ್ಯಕರ್ತೆಯರೊಂದಿಗೆ ನಗರದ ತಮ್ಮ ನಿವಾಸದಲ್ಲಿ ಚರ್ಚೆ ನಡೆಸಿದ ಅವರು, ಆಶಾ ಕಾರ್ಯಕರ್ತರ ಬೇಡಿಕೆಗಳು ನ್ಯಾಯಯುತವಾಗಿವೆ. ಹೀಗಾಗಿ ಅವರು ಇಂದಿನಿಂದ ಆರಂಭಿಸಿರುವ ಅನಿರ್ದಿಷ್ಟಾವಧಿ ಹೋರಾಟವನ್ನು ಕಾಂಗ್ರೆಸ್ ಬೆಂಬಲಿಸಲಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಆಶಾ ಕಾರ್ಯಕರ್ತೆಯರು, ನಾವು ದಿನವಿಡೀ ದುಡಿದರೂ ಸರಕಾರ ನಮಗೆ ನೀಡುತ್ತಿರುವ ಹಣ ನಮ್ಮ ಪ್ರಯಾಣಕ್ಕೆ ಸಾಲುತ್ತಿಲ್ಲ. ಹೀಗಾಗಿ ನಮಗೆ ಕನಿಷ್ಟ 12 ಸಾವಿರ ರೂ.ಗೌರವ ಧನ ಹೆಚ್ಚಿಸಬೇಕು. ಹಾಗೂ ಕೋವಿಡ್ ಸಂದರ್ಭದಲ್ಲಿ ಪ್ರತಿ ಪಿಪಿಇ ಕಿಟ್‍ಗಳನ್ನು ಒದಗಿಸುವಂತೆ ಸರಕಾರದ ಮೇಲೆ ಒತ್ತಡ ತರಬೇಕೆಂದು ಡಿ.ಕೆ.ಶಿವಕುಮಾರ್ ಗೆ ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News