ಕಸಾಪ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

Update: 2020-07-10 18:14 GMT

ಬೆಂಗಳೂರು, ಜು.10: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 2020-21ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಆಸಕ್ತರಿಂದ ಅರ್ಜಿ ಅಹ್ವಾನಿಸಲಾಗಿದೆ.

2020ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ ಮಳಿಗೆಯಲ್ಲಿ ಜುಲೈ 1 ರಿಂದ ರೂ. 25 ಶುಲ್ಕ ಪಾವತಿಸಿ ಪರೀಕ್ಷಾ ನಿಯಾಮಾವಳಿ ಹಾಗೂ ಅರ್ಜಿ ಪಡೆಯಬಹುದಾಗಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಅಂಚೆ ಮೂಲಕ 30 ರೂ ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಲಾಗುವುದು. ಪರೀಕ್ಷಾ ಅರ್ಜಿಯನ್ನು www.kasapa.in ವೆಬ್‍ಸೈಟ್ ಮೂಲಕ ಸಹ ಪಡೆದುಕೊಳ್ಳಬಹುದು. ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ. 25 ಪ್ರತ್ಯೇಕವಾಗಿ ಪಾವತಿಸಬೇಕು.

ಹೆಚ್ಚಿನ ಮಾಹಿತಿಗೆ ಕನ್ನಡ ಸಾಹಿತ್ಯ ಪರಿಷತ್, ಚಾಮರಾಜಪೇಟೆ, ಬೆಂಗಳೂರು -18, ದೂರವಾಣಿ ಸಂಖ್ಯೆ 080-26623584 ಸಂಪರ್ಕಿಸಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್‍ನ ಗೌರವ ಕಾರ್ಯದರ್ಶಿ ಡಾ. ರಾಜಶೇಖರ ಹತಗುಂದಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News