ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಹೋಂ ಕ್ವಾರಂಟೈನ್

Update: 2020-07-11 05:51 GMT

ಮೈಸೂರು, ಜು.11: ಮಾಜಿ ಸಚಿವ, ಶಾಸಕ ಎಸ್.ಎ.ರಾಮದಾಸ್ ಅವರ ಇಬ್ಬರು ಆಪ್ತ ಸಹಾಯಕರಿಗೆ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಶಾಸಕರು ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಮದಾಸ್, ‘‘ನನ್ನ ಇಬ್ಬರು ಆಪ್ತ ಸಹಾಯಕರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಅವರು ಈಗಾಗಲೇ ಸೂಕ್ತವಾದ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾನೂ ಕೂಡ ಮುಂಜಾಗ್ರತಾ ಕ್ರಮವಾಗಿ 7 ದಿನಗಳ ಕಾಲ ಹೋಂ ಕ್ವಾರಂಟೈನ್ ಆಗಿರುತ್ತೇನೆ’’ ಎಂದು ತಿಳಿಸಿದ್ದಾರೆ.

ಮಾಜಿ ವೈದ್ಯಕೀಯ ಶಿಕ್ಷಣ ಸಚಿವರಾಗಿರುವ ರಾಮದಾಸ್ ಅವರು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಹಾಲಿ ಶಾಸಕರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News