ಮಹಿಳೆ ನಾಪತ್ತೆ: ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿರುವ ಶಂಕೆ

Update: 2020-07-11 06:19 GMT

ಬಂಟ್ವಾಳ, ಜ.11: ಮಹಿಳೆಯೊಬ್ಬರು ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯ ಮುಳುಗು ತಜ್ಞರಿಂದ ಮಹಿಳೆಗಾಗಿ ನದಿಯಲ್ಲಿ ಹುಡುಕಾಟ ನಡೆಯುತ್ತಿದೆ.

ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಗೋಪಿ ಪೂಜಾರಿ(49) ಕಾಣೆಯಾಗಿರುವ ಮಹಿಳೆ.

ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ನಿವಾಸಿಯಾಗಿರುವ ಗೋಪಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರೆನ್ನಲಾಗಿದೆ. ಅವರು ಅಕ್ಕನ ಮನೆ ಬಿ.ಸಿ.ರೋಡಿನ ಚಿಕ್ಕಯ್ಯಮಠ ಎಂಬಲ್ಲಿ ಕೆಲದಿನಗಳಿಂದ ತಂಗಿದ್ದರು. ಎಂದಿನಂತೆ ಶುಕ್ರವಾರ ರಾತ್ರಿ ಊಟ ಮಾಡಿ ಮಲಗಿದ್ದ ಗೋಪಿ ಮುಂಜಾನೆ 5 ಗಂಟೆಯ ವೇಳೆ ಮನೆಯಿಂದ ಕಾಣೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಮನೆಯವರು ಹುಡುಕಾಟ ನಡೆಸಿದಾಗ ಪಾಣೆಮಂಗಳೂರು ನೂತನ ಸೇತುವೆಯ ಮೇಲೆ ಗೋಪಿ ಬಳಸುತ್ತಿದ್ದ ಶಾಲು ಹಾಗೂ ಕೈಯಲ್ಲಿದ್ದ ಬಳೆ  ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅವರು ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿರಬಹುದು ಎಂಬ ಶಂಕೆಯನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ.

ಗೋಪಿ ಈ ಹಿಂದೆಯೂ ಮನೆಯಲ್ಲಿ ಆತ್ಮಹತ್ಯೆ ಗೆ ಪ್ರಯತ್ನ ಮಾಡಿದ್ದರು ಎಂದು ಹೇಳಲಾಗಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News