ಪುತ್ತೂರು: ಕಾನ್‌ಸ್ಟೇಬಲ್ ಸಹಿತ ಐವರಿಗೆ ಕೊರೋನ ಪಾಸಿಟಿವ್

Update: 2020-07-11 09:28 GMT

ಪುತ್ತೂರು, ಜು.11: ಪುತ್ತೂರು ನಗರ ಪೊಲೀಸ್ ಠಾಣಾ ಕಾನ್ಸ್‌ಟೇಬಲ್, ಅದೇ ಠಾಣೆಯಲ್ಲಿರುವ ಮಹಿಳಾ ಕಾನ್‌ಸ್ಟೇಬಲ್ ಒಬ್ಬರ ತಾಯಿ ಸೇರಿದಂತೆ ಪುತ್ತೂರು ತಾಲೂಕಿನಲ್ಲಿ ಐವರಿಗೆ ಶನಿವಾರ ಕೊರೋನ ಪಾಸಿಟಿವ್ ದೃಢಪಟ್ಟಿದೆ.

ಪುತ್ತೂರು ನಗರ ಪೊಲೀಸ್ ಠಾಣೆಯ 30 ವರ್ಷದ ಕಾನ್‌ಸ್ಟೇಬಲ್ ಮತ್ತು ಮಹಿಳಾ ಕಾನ್‌ಸ್ಟೇಬಲ್ ಒಬ್ಬರ ತಾಯಿ 48 ವರ್ಷ ಪ್ರಾಯದ ಮಹಿಳೆಯಲ್ಲಿ ಕೊರೋನ ಸೋಂಕು ಕಾಣಿಸಿಕೊಂಡಿದೆ.

ವಾರದ ಹಿಂದೆ ವರದಿಯಾಗಿದ್ದ ಸಂಚಾರ ಪೊಲೀಸ್ ಠಾಣಾ ಮಹಿಳಾ ಸಿಬ್ಬಂದಿಯ ಸಂಪ್ಯದಲ್ಲಿರುವ ಪೊಲೀಸ್ ವಸತಿ ಗೃಹದ ಇನ್ನೊಂದು ಪ್ರಕರಣದ ಮಹಿಳಾ ಕಾನ್‌ಸ್ಟೇಬಲ್ ಅವರ ತಾಯಿ ಪುತ್ತೂರು ನಗರ ಪೊಲೀಸ್ ಠಾಣಾ ವಸತಿ ಗೃಹದಲ್ಲಿ ವಾಸಿಸುತ್ತಿದ್ದರು. ಗ್ರಾಮಾಂತರ ಪ್ರದೇಶವಾದ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ನಿಡ್ಯಾಲ ನಿವಾಸಿ 56 ವರ್ಷದ ವ್ಯಕ್ತಿಯೊಬ್ಬರಲ್ಲಿ ಕೊರೋನ ದೃಢಪಟ್ಟಿದೆ. ಈ ಮೂವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ದಾಖಲಾಗಿದ್ದ 28 ವರ್ಷ ಪ್ರಾಯದ ಆರ್ಯಾಪು ಗ್ರಾಮದ ಕಲ್ಲರ್ಪೆ ನಿವಾಸಿ ಬಾಣಂತಿಯಲ್ಲಿ ವೈರಸ್ ಸೋಂಕು ಪತ್ತೆಯಾಗಿದೆ. ಬನ್ನೂರು ಗ್ರಾಮದ ನೀರ್ಪಾಜೆ ನಿವಾಸಿ 48 ವರ್ಷ ಪ್ರಾಯದ ವ್ಯಕ್ತಿಯಲ್ಲಿ ಕೊರೋನ ಸೋಂಕು ಕಾಣಿಸಿಕೊಂಡಿದ್ದು, ಅವರು ಈಗಾಗಲೇ ಜ್ವರದ ಕಾರಣದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಈ ತನಕ ಒಟ್ಟು 38 ಕೊರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News