ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶ ಪರೀಕ್ಷೆ ರದ್ದು ಮಾಡಿದ ವಿಐಟಿ

Update: 2020-07-11 12:29 GMT

ಬೆಂಗಳೂರು, ಜು.11: ಕೊರೋನ ಸೋಂಕಿನ ಪ್ರಮಾಣ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ವಿಲ್ಲೋರ್ ಇಸ್ಟಿಟಿಟ್ಯೂಟ್ ಆಫ್ ಟೆಕ್ನಾಲಜಿಯು(ವಿಐಟಿ) ವಿವಿಧ ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ.

ಚೆನ್ನೈ, ಆಂಧ್ರ ಹಾಗೂ ಮಧ್ಯಪ್ರದೇಶದಲ್ಲಿನ ವಿಐಟಿ ಸಮೂಹ ಸಂಸ್ಥೆಗಳಲ್ಲಿನ ವಿವಿಧ ಕೋರ್ಸ್ ಗಳಿಗೆ ಪರೀಕ್ಷೆ ನಡೆಸಲಾಗುತ್ತಿತ್ತು. ದ್ವಿತೀಯ ಪಿಯು ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಹಾಗೂ ಜೀವಶಾಸ್ತ್ರ ವಿಷಯಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಈ ಬಾರಿ ಪ್ರವೇಶ ಪ್ರಕ್ರಿಯೆ ನಡೆಯಲಿದೆ. ಜೆಇಇ ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನೂ ಪರಿಗಣಿಸಲಾಗುವುದು.

ಅರ್ಜಿಗಳನ್ನು ವಿಐಟಿ ವೆಬ್‍ಸೈಟ್ www.vit.ac.in ನಲ್ಲಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ಇ-ಮೇಲ್: ugadmission@vit.ac.in ಅಥವಾ ದೂರವಾಣಿ ಸಂಖ್ಯೆ:1800-102-0536ಕ್ಕೆ ಸಂಪರ್ಕಿಸಬಹುದು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News