ಉಡುಪಿ: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ; ಪೊಕ್ಸೋ ಕಾಯ್ದೆಯಡಿ ಆರೋಪಿ ಬಂಧ

Update: 2020-07-11 13:53 GMT

ಉಡುಪಿ, ಜು.11: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯವೆಸಗಿ ಗರ್ಭಿಣಿಯನ್ನಾಗಿಸಿರುವ ಆರೋಪಿಯನ್ನು ಪೋಕ್ಸೋ ಕಾಯಿದೆಯಡಿ ಉಡುಪಿ ಪೊಲೀಸರು ಇಂದು ಬಂಧಿಸಿದ್ದಾರೆ.

ಬಂಧಿತನನ್ನು ಬೆಳಗಾವಿ ಮೂಲದ ವಲಸೆ ಕಾರ್ಮಿಕ ಪುಂಡಲೀಕ(21) ಎಂದು ಗುರುತಿಸಲಾಗಿದೆ. ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿರುವ ಈತ ಕೆಲವು ತಿಂಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ದೂರಲಾಗಿದೆ.

ಈ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಬಂದ ದೂರಿನಂತೆ ಕಾನೂನು ಪರಿವೀಕ್ಷಾಧಿಕಾರಿ ಪ್ರಭಾಕರ ಆಚಾರ್, ಇಂದು ಉಡುಪಿ ಮಹಿಳಾ ಪೋಲಿಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದೂರು ನೀಡಿದರು.

ಪೊಲೀಸ್ ನಿರೀಕ್ಷಕ ಸಿ.ಕಿರಣ್ ಮಾರ್ಗದರ್ಶನದಲ್ಲಿ ಮಹಿಳಾ ಠಾಣಾ ಉಪ ನಿರೀಕ್ಷಕಿ ವೈಲೆಟ್ ಫೆಮಿನಾ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಇಂದು ಬಂಧಿಸಿ, ಉಡುಪಿಯ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News