ಬೆಂಗಳೂರು: ವಾಸುದೇವಮಯ್ಯ ಆತ್ಮಹತ್ಯೆ ಪ್ರಕರಣದ ಬಳಿಕ ಮತ್ತೊಂದು ಬಹುಕೋಟಿ ವಂಚನೆ; ಆರೋಪ

Update: 2020-07-11 17:08 GMT

ಬೆಂಗಳೂರು, ಜು.11: ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕಿನ ಮಾಜಿ ಸಿಇಒ ವಾಸುದೇವಮಯ್ಯ ಆತ್ಮಹತ್ಯೆ ಪ್ರಕರಣದ ಬಳಿಕ ಮತ್ತೊಂದು ಬಹುಕೋಟಿ ವಂಚನೆ ಆರೋಪ ಕೇಳಿಬಂದಿದ್ದು, ಈ ಸಂಬಂಧ ಇಲ್ಲಿನ ಶಂಕರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಶಂಕರಪುರದಲ್ಲಿರುವ ಗುರುಸೌರ್ವಭೌಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್‍ನಲ್ಲಿ ಠೇವಣಿಯಲ್ಲಿದ್ದ ಸುಮಾರು 233 ಕೋಟಿ ರೂ. ನಗದು ಅಕ್ರಮವಾಗಿ ವರ್ಗಾವಣೆ ಮಾಡಿದ್ದು, ಇದರಲ್ಲಿ ಈ ಬ್ಯಾಂಕಿನ ಅಧ್ಯಕ್ಷ ರಾಮಕೃಷ್ಣ, ಉಪಾಧ್ಯಕ್ಷ ಸತ್ಯನಾರಾಯಣ, ಸದಸ್ಯ ವಾಸುದೇವ ಮಯ್ಯ ಸೇರಿ ಆಡಳಿತ ಮಂಡಳಿಯ ಸದಸ್ಯರಾಗಿದ್ದ ಒಟ್ಟು 14 ಮಂದಿ ವಿರುದ್ಧ ದೂರು ನೀಡಲಾಗಿದೆ ಎಂದು ಬ್ಯಾಂಕ್ ವಿಶೇಷ ಅಧಿಕಾರಿ ಸಂಜಯ್ ಕಲಾಸ್ಕರ್ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಶ್ರೀ ಗುರುರಾಘವೇಂದ್ರ ಬ್ಯಾಂಕ್ ಬಹುಕೋಟಿ ಅವ್ಯವಹಾರ ಪ್ರಕರಣದಲ್ಲಿ ಆರೋಪಿಗಳಾಗಿದ್ದ ರಾಮಕೃಷ್ಣ ಹಾಗೂ ವಾಸುದೇವಮಯ್ಯ ಅವರು ಇತ್ತೀಚಿಗಷ್ಟೇ ಗುರುಸೌರ್ವಭೌಮ ಬ್ಯಾಂಕಿನ ಆಡಳಿತ ಮಂಡಳಿ ಸಕ್ರಿಯ ಸದ್ಯಸರಾಗಿದ್ದರು ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News