Breaking News: 'ಬಿಗ್ ಬಿ' ಅಮಿತಾಬ್ ಬಚ್ಚನ್ ಗೆ ಕೊರೋನ ವೈರಸ್ ದೃಢ: ಆಸ್ಪತ್ರೆಗೆ ದಾಖಲು

Update: 2020-07-11 17:45 GMT

ಹೊಸದಿಲ್ಲಿ: ಬಾಲಿವುಡ್ ನಟ , ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅವರು ಕೊರೋನ ವೈರಸ್ ಸೋಂಕಿಗೊಳಗಾಗಿರುವುದು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರನ್ನು ಮುಂಬೈಯ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

“ನನಗೆ ಕೊರೋನ ವೈರಸ್ ದೃಢಪಟ್ಟಿದೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕಾರಿಗಳಿಗೆ ಆಸ್ಪತ್ರೆ ಮಾಹಿತಿ ನೀಡುತ್ತಿದೆ. ಕುಟುಂಬಸ್ಥರು ಮತ್ತು ಸಿಬ್ಬಂದಿಗೂ ಪರೀಕ್ಷೆ ನಡೆಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಕಳೆದ 10 ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿದ್ದವರು ದಯವಿಟ್ಟು ಪರೀಕ್ಷೆಗೆ ಒಳಗಾಗಿ” ಎಂದು ಅಮಿತಾಬ್ ಬಚ್ಚನ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News