ಲಾಕ್‍ಡೌನ್ ತೀರ್ಮಾನಕ್ಕೆ ಕುಮಾರಸ್ವಾಮಿ ಸ್ವಾಗತ

Update: 2020-07-11 18:21 GMT

ಬೆಂಗಳೂರು, ಜು.11: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್‍ಡೌನ್‍ಗೆ ಸರಕಾರ ನಿರ್ಧಾರ ಮಾಡಿರುವ ಬೆನ್ನಲ್ಲೆ ಸರಕು ಸಾಗಣೆ ವಾಹನಗಳನ್ನು ಹೊರತುಪಡಿಸಿ, ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ಒತ್ತಾಯಿಸಿದ್ದಾರೆ.

ಕೊರೋನ ವೈರಸ್ ಸಮುದಾಯಕ್ಕೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಮನಗಂಡು ಇತರೆ ಗಂಭೀರ ಜಿಲ್ಲೆಗಳಲ್ಲಿಯೂ ಲಾಕ್‍ಡೌನ್ ಮತ್ತೆ ಜಾರಿಗೊಳಿಸಿದರೆ ಸಾರ್ವಜನಿಕ ಸ್ವಾಸ್ಥ್ಯದ ಹಿತದೃಷ್ಟಿಯಿಂದ ನಾನು ಬೆಂಬಲಿಸುತ್ತೇನೆ ಎಂದು ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News